ಸುಳ್ಯದ ಜಟ್ಟಿಪಳ್ಳ ಕೊಡಿಯಾಲಬೈಲು ರಸ್ತೆ ಅಭಿವೃದ್ಧಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಶಾಸಕಿ ಭಾಗೀರಥಿ ಮುರುಳ್ಯ, ಟಿ.ಎಂ.ಶಹೀದ್ ತೆಕ್ಕಿಲ್ ಮೊದಲಾದವರಿದ್ದರು.  
ಉಡುಪಿ

ಜಟ್ಟಿಪಳ್ಳ-ಕೊಡಿಯಾಲಬೈಲು ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ಸುಳ್ಯ: ಜಟ್ಟಿಪಳ್ಳ-ಕೊಡಿಯಾಲಬೈಲು ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ 1 ಕೋಟಿ ರೂ. ಅನುದಾನದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ., ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಪ್ರಮುಖರಾದ ಎಸ್.ಎನ್.ಮನ್ಮಥ, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ಪಿ.ಎಸ್.ಗಂಗಾಧರ, ನಿತ್ಯಾನಂದ ಮುಂಡೋಡಿ, ದಿನೇಶ್ ಮಡಪ್ಪಾಡಿ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಎಂ.ಮುಸ್ತಫಾ, ಎಂ.ವೆಂಕಪ್ಪ ಗೌಡ, ಶಾಫಿ ಕುತ್ತಮೊಟ್ಟೆ, ಸರಸ್ವತಿ ಕಾಮತ್, ಗೀತಾ ಕೋಲ್ಚಾರ್, ಮಮತಾ ಕುದ್ಪಾಜೆ, ರಾಜು ಪಂಡಿತ್, ಸತ್ಯಕುಮಾರ್ ಆಡಿಂಜ, ಚಿತ್ರಾ ಕುಮಾರಿ, ದೊಡ್ಡಣ್ಣ ಬರೆಮೇಲು ಮತ್ತಿತರರು ಉಪಸ್ಥಿತರಿದ್ದರು.