ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ‘ಕುಂಪಲಾಷ್ಟಮಿ’ ಉತ್ಸವಕ್ಕೆ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಚಾಲನೆ ನೀಡಿದರು. ಮಂದಿರ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮತ್ತಿತರರು ಉಪಸ್ಥಿತರಿದ್ದರು. 
ಉಡುಪಿ

ಮನುಷ್ಯ ಧರ್ಮದಲ್ಲಿ ಕಷ್ಟ-ಕಾರ್ಪಣ್ಯ ಸಹಜ

ವಿಜಯವಾಣಿ ಸುದ್ದಿಜಾಲ ಉಳ್ಳಾಲ


ಮನುಷ್ಯ ಧರ್ಮದಲ್ಲಿ ಕಷ್ಟ-ಕಾರ್ಪಣ್ಯ ಸಹಜ, ಎಲ್ಲವನ್ನೂ ಶ್ರೀ ಕೃಷ್ಣನಿಗೆ ಸಮರ್ಪಿಸಿದಾಗ ಕಷ್ಟಗಳಿಂದ ಮುಕ್ತರಾಗಬಹುದು ಎಂದು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.
ಕುಂಪಲ ಶ್ರೀ ಬಾಲಕೃಷ್ಣ ಮಂದಿರ ಆಶ್ರಯದಲ್ಲಿ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಾನುವಾರ ‘ಕುಂಪಲಾಷ್ಟಮಿ-2026’ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಮಂಗಳೂರಿನ ಪ್ರಥಮ ಮಹಿಳೆ ಅಹಲ್ಯ ಕದ್ರಿ, ಸರಿಗಮಪ ಲಿಟ್ಲ್ ಚಾಂಪ್ ಸೀಝನ್-6ರ ವಿಜೇತ ಅಚಿಂತ್ಯಾ ರೈ ಅವರನ್ನು ಸನ್ಮಾನಿಸಲಾಯಿತು.

ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ, ವಕೀಲ ಗಂಗಾಧರ ಉಳ್ಳಾಲ್, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಹರ್ಷಿತ್ ನೋಂಡ, ಮಂದಿರದ ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಂಪಲ, ಉತ್ಸವ ಸಮಿತಿ ಅಧ್ಯಕ್ಷ ಸೂರಜ್ ಸಾಗರ್ ಕುಂಪಲ, ಕಾರ್ಯದರ್ಶಿ ಸತ್ಯಪ್ರಸಾದ್ ಅಮೃತನಗರ, ಮಹಿಳಾ ಸಮಿತಿ ಅಧ್ಯಕ್ಷೆ ಗಾಯತ್ರಿ ಜಯಚಂದ್ರ, ಪ್ರದಾನ ಕಾರ್ಯದರ್ಶಿ ಶುಭ ಎಚ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಂದಿರ ಅಧ್ಯಕ್ಷ ಸತೀಶ್ ಕುಂಪಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಜನಾ ಸಂಚಾಲಕ ಕೃಷ್ಣ ಪೊನ್ನೆತ್ತೋಡು ಸನ್ಮಾನಪತ್ರ ವಾಚಿಸಿದರು. ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್.ಕುಂಪಲ ನಿರೂಪಿಸಿದರು.