ಉಡುಪಿ ತೆಂಕನಿಡಿಯೂರು ಕಾಲೇಜಿನಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮವನ್ನು ಉದಯಕುಮಾರ್ ಶೆಟ್ಟಿ ಉದ್ಘಾಟಿಸಿದರು. ಕೀರ್ತಿ ಎಸ್., ನಿತ್ಯಾನಂದ್ ವಿ. ಗಾಂವ್ಕರ್, ಶ್ರೀಕೃಷ್ಣ, ಉಮಾ, ಡಾ. ರೋಷನ್ ಶೆಟ್ಟಿ ಇದ್ದರು.
* ಬಾಳಿಗಾ ಕಾಲೇಜಿನ ಸಮನ್ವಯಾಧಿಕಾರಿ ಕೀರ್ತಿ ಎಸ್. ಆತಂಕ
* ತೆಂಕನಿಡಿಯೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ
ಉಡುಪಿ: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರೂ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದು, ಸಮಾಜದಿಂದ ವಿಮುಖವಾಗಿ ಸಾಗುತ್ತಿರುವುದು ಆತಂಕಕಾರಿ ವಿಚಾರ. ತಮ್ಮ ಆರೋಗ್ಯ ಕೆಡಿಸಿಕೊಳ್ಳುತ್ತಿರುವುದಲ್ಲದೆ, ವೃತ್ತಿ ಬದುಕನ್ನೂ ಸಹ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಅಪರಾಧಗಳಲ್ಲಿಯೂ ತೊಡಗಿ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ ಎಂದು ಉಡುಪಿಯ ಎ.ವಿ. ಬಾಳಿಗಾ ಕಾಲೇಜಿನ ಸಮನ್ವಯಾಧಿಕಾರಿ ಕೀರ್ತಿ ಎಸ್. ಆತಂಕ ವ್ಯಕ್ತಪಡಿಸಿದರು.
ಉಡುಪಿ ತೆಂಕನನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಆಶ್ರಯದಲಿ ಗುರುವಾರ (ಜು.30) ಆಯೋಜಿಸಿದ್ದ 'ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಲ್ಪೆ ವಲಯದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ್ ವಿ. ಗಾಂವ್ಕರ್ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ವಿರೋಧಿ ಮತ್ತು ಸ್ವಾಸ್ಯ ಸಂಕಲ್ಪದ ಪ್ರತಿಜ್ಞಾವಿಧಿ ಬೋಧಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಮಲ್ಪೆ ವಲಯಾಧ್ಯಕ್ಷ ಶ್ರೀಕೃಷ್ಣ, ಕೆಳಾರ್ಕಳಬೆಟ್ಟು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಉಮಾ ಉಪಸ್ಥಿತರಿದ್ದರು.
ಕಾಲೇಜಿನ ಮಾದಕ ದ್ರವ್ಯ ತಡೆ ಘಟಕದ ನೋಡಲ್ ಅಧಿಕಾರಿ ಡಾ. ರೋಷನ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ವಂದಿಸಿದರು.