ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಸಿಬಿಎಸ್‌ಇ ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿಗೆ ಚಾಲನೆ ನೀಡಲಾಯಿತು. ಅಶ್ವಿನ್ ಕುಮಾರ್ ಪಡುಕೋಣೆ, ಮನಮೋಹನ್ ನಾಯ್ಕ ಕೆ.ಜಿ., ನಿತೀಶ್, ಪವನ್ ಇತರರು ಇದ್ದರು.
ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿಗಳ ಕ್ರೀಡಾ ಕೌಶಲ ಉತ್ತೇಜಿಸುವ ನಿಟ್ಟಿನಲ್ಲಿ ಟೇಬಲ್ ಟೆನ್ನಿಸ್ ತರಬೇತಿಗೆ ಶನಿವಾರ ಚಾಲನೆ ನೀಡಲಾಯಿತು. ತರಬೇತಿ ಉದ್ಘಾಟಿಸಿ ಮಾತನಾಡಿದ ಐಟಿಟಿಎಫ್ ಕೋಚ್ ಅಶ್ವಿನ್ ಕುಮಾರ್ ಪಡುಕೋಣೆ, ಟೇಬಲ್ ಟೆನ್ನಿಸ್ ದೈಹಿಕ ಸಾಮರ್ಥ್ಯದ ಜತೆಗೆ ಮಕ್ಕಳಲ್ಲಿ ಏಕಾಗ್ರತೆ, ಚುರುಕುತನ ಮತ್ತು ಆತ್ಮವಿಶ್ವಾಸ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಜತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಬೇಕು ಎಂದರು.
ಶಾಲೆ ಪ್ರಾಂಶುಪಾಲ ಮನಮೋಹನ್ ನಾಯ್ಕ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಕೋಚ್‌ಗಳಾದ ನಿತೀಶ್, ಪವನ್, ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್., ಎಸ್‌ಡಿಎಂ ಪದವಿ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದ್ದರು. ಶಿಕ್ಷಕಿ ಸುಜನಾ ವಾಲ್ತಾಜೆ ನಿರೂಪಿಸಿದರು.