ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​  
ಉಡುಪಿ

ಪ್ರಮೋದ್​ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್​

ಉಡುಪಿ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ನಡೆಸಿದ ಟನೆಗೆ ಸಂಬಂಧಿಸಿದಂತೆ ಅಮಾಯಕರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ಆರೋಪಿಸಿ ಮೀನುಗಾರರ ಮುಖಂಡರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಗೊಳಿಸಿ ಆದೇಶಿಸಿದೆ.

ವರ್ಷದ ಹಿಂದೆ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಉತ್ತರಕರ್ನಾಟಕದ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಮಾಯಕರ ಬಂಧನ ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಮೋದ್​ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಮಲ್ಪೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. 

ಹೈಕೋರ್ಟ್​ ಆದೇಶ
ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಪ್ರಮೋದ್​ ಮಧ್ವರಾಜ್​ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣವನ್ನು ವಜಾಗೊಳಿಸುವ ಮೂಲಕ ಮಾಜಿ ಸಚಿವರಿಗೆ ದೊಡ್ಡ ರಿಲೀಫ್​ ನೀಡಿದೆ.