rain 
ಉಡುಪಿ

ಕಾಸರಗೋಡು ಶಿಕ್ಷಣ ಸಂಸ್ಥೆಗಳಿಗೆ ಆ.3ರಂದು ರಜೆ

ಇಂದಿರಾ ಎನ್ ಕೆ

ಕಾಸರಗೋಡು: ಜಿಲ್ಲೆಯಲ್ಲಿ ಮುಂದುವರಿಯುತ್ತಿರುವ ಬಿರುಸಿನ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರು ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಆ.3ರಂದು ರಜೆ ಘೋಷಿಸಿದ್ದಾರೆ.

ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಸಿಎಸ್‌ಇ ಕಾಲೇಜುಗಳು, ಸಿಬಿಎಸ್‌ಇ ಶಾಲೆಗಳು ಮತ್ತು ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಮದರಸಾಗಳಂತಹ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸಲಿದೆ.

ಪೂರ್ವನಿಗದಿತ ವಿಶ್ವವಿದ್ಯಾಲಯ ಅಥವಾ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಪ್ರಕಟಣೆ ತಿಳಿಸಿದೆ.