ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಹರೀಶ್ ಎಸ್.ಇಂಜಾಡಿ ಅಭಿನಂದಿಸಿದರು. ಪ್ರಾಚಾರ್ಯ ಸೋಮಶೇಖರ್ ನಾಯಕ್, ಪ್ರಮುಖರಾದ ಸೌಮ್ಯ ಭರತ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವುದು ಸ್ಫೂರ್ತಿಯ ಸಂಕೇತ. ದೇವಳದಿಂದ ಕನಿಷ್ಠ ಶುಲ್ಕ ಪಾವತಿಸಿ ಶಿಕ್ಷಣ ಪಡೆಯಲು ವಿದ್ಯಾಸಂಸ್ಥೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ದೇವಳದಿಂದ ಭೋೀಜನ ಸಹಿತ ಇತರ ಅನುಕೂಲತೆಗಳನ್ನು ಕಲ್ಪಿಸಲಾಗಿದೆ ಎಂದು ಕುಕ್ಕೆ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ ಹೇಳಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದರು.
ಮುಖ್ಯಅತಿಥಿಗಳಾಗಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೌವ್ಯಾ ಭರತ್, ಪ್ರವೀಣ ರೈ ಮರುವಂಜ, ಲೀಲಾ ಮನಮೋಹನ್, ಅಜಿತ್ ಪಾಲೇರಿ, ನಿವೃತ್ತ ಗ್ರಂಥಪಾಲಕ ಬಾಬು ಎಚ್.ಹಾಸನಡ್ಕ, ಪ್ರಾಂಶುಪಾಲ ಸೋಮಶೇಖರ್ ನಾಯಕ್, ಪ್ರೌಢಶಾಲೆ ಮುಖ್ಯಶಿಕ್ಷಕರಾದ ನಂದಾ ಹರೀಶ್, ಶಿಕ್ಷಕ ಎಂ.ಕೃಷ್ಣ ಭಟ್, ಶಿಕ್ಷಕ-ರಕ್ಷಕ ಸಂದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಪ್ರಮುಖರಾದ ರೇಖಾರಾಣಿ ಸೋಮಶೇಖರ್, ಜಯಪ್ರಕಾಶ್ ಆರ್., ಲೋಕೇಶ್ ಬಿ.ಎನ್., ಗುಣವರ್ಧನ ಕೆದಿಲ, ಶಶಿಧರ್ ಕೆ. ಉಪಸ್ಥಿತರಿದ್ದರು. ಉಪನ್ಯಾಸಕ ಪ್ರವಿಣ್ ಎರ್ಮಾಯಿಲ್ ನಿರೂಪಿಸಿದರು.
ವಿದ್ಯಾರ್ಥಿಗಳಿಗೆ ಗೌರವ
ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸಂಸ್ಥೆಯ 158 ವಿದ್ಯಾರ್ಥಿಗಳಿಗೆ ಶಿಕ್ಷಕ-ರಕ್ಷಕ ಸಂದ ವತಿಯಿಂದ ಅಭಿನಂದಿಸಲಾಯಿತು. ಬಳಿಕ ಪ್ರಥಮ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ದ.ಕ. ಜಿಲ್ಲಾ ಉಪನ್ಯಾಸಕರ ಸಂದ ಪ್ರಧಾನ ಸಂಟನಾ ಕಾರ್ಯದರ್ಶಿಯಾಗಿ ಆಯ್ಕೆಯಾದ ಉಪನ್ಯಾಸಕ ಜಯಪ್ರಕಾಶ್ ಆರ್. ಅವರನ್ನು ಸನ್ಮಾನಿಸಲಾಯಿತು.