ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ನಡೆಯಿತು. ಪ್ರಮುಖರಾದ ಜಯಕರ ಶೆಟ್ಟಿ, ಡಾ.ಕೆ.ಉಮೇಶ ಶೆಟ್ಟಿ, ಶಿವರಾಮ ಶೆಟ್ಟಿ ಮತ್ತಿತರರಿದ್ದರು.
ಕುಂದಾಪುರ: ವಿದ್ಯಾರ್ಥಿಗಳು ವಾನವೀಯ ಮೌಲ್ಯಗಳೊಂದಿಗೆ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತದೆ. ಘಟಕ ಹಮ್ಮಿಕೊಳ್ಳುವ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿ ಹೇಳಿದರು.
ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ.ಕೆ.ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕೋಶಾಧಿಕಾರಿ ಶಿವರಾಮ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ, ವಿಶ್ವವಿದ್ಯಾಲಯಮಟ್ಟದ ವಿವಿಧ ಯುವ ರೆಡ್‌ಕ್ರಾಸ್ ಘಟಕದ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ಉಪಸ್ಥಿತರಿದ್ದರು. ಅನಘಾ ಪ್ರಾರ್ಥಿಸಿದರು. ಯೋಗೀಶ್ ಶ್ಯಾನುಭಾಗ್ ಸ್ವಾಗತಿಸಿದರು. ಪ್ರೀತಿ ಶೆಟ್ಟಿ ವಂದಿಸಿದರು. ಶವಾ ನಿರೂಪಿಸಿದರು.