ವಿಜಯವಾಣಿ ಸುದ್ದಿಜಾಲ ಹೆಬ್ರಿ
ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಉದ್ಯಮಿಗಳಾಗಿ ಉದ್ಯೋಗದಾತರಾಗಬೇಕು. ಆ ಮೂಲಕ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಿದರೆ ಸಮಾಜ ಉನ್ನತಿಯಾಗುತ್ತದೆ ಎಂದು ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಹೇಳಿದರು.
ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮ ದಿನಾಚರಣೆ, ಗುರುಪೂಜೆ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಸುನೀಲ್ ಕುಮಾರ್, ಮುನಿಯಾಲು ಕೆಪಿಎಸ್ ಶಿಕ್ಷಕ ಪ್ರಕಾಶ ಪೂಜಾರಿ ಮಾತಿಬೆಟ್ಟು ಶುಭ ಹಾರೈಸಿದರು. ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಬೇಳಂಜೆ ಹರೀಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮೂಲ್ಕಿ ಬಿಲ್ಲವ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಸೂರತ್ ಉದ್ಯಮಿ ಮುದ್ರಾಡಿ ಮನೋಜ್ ಸಿ.ಪೂಜಾರಿ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂದ ಅಧ್ಯಕ್ಷ ವೈ.ಸುಧೀರ್ ಕುಮಾರ್, ಹೆಬ್ರಿ ಗ್ರಾಪಂ ಪೂರ್ವಾಧ್ಯಕ್ಷ ತಾರಾನಾಥ ಬಂಗೇರ, ಹೆಬ್ರಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಾರಾಯಣ ಪೂಜಾರಿ, ಪೂರ್ವಾಧ್ಯಕ್ಷರಾದ ಜರ್ವತ್ತು ಭೋಜ ಪೂಜಾರಿ, ಭೋಜ ಪೂಜಾರಿ, ಗೌರವಾಧ್ಯಕ್ಷ ಎಚ್.ಎಸ್.ಅಣ್ಣಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಪೂಜಾರಿ, ಕೋಶಾಧಿಕಾರಿ ರತ್ನಾಕರ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ ಪೂಜಾರಿ, ಕಾರ್ಯದರ್ಶಿ ಹೇಮಾವತಿ ಪೂಜಾರಿ, ಯುವ ಘಟಕದ ಅಧ್ಯಕ್ಷ ಪ್ರವೀಣ್ ಪೂಜಾರಿ, ಕಾರ್ಯದರ್ಶಿ ಸುನೀಲ್ ಪೂಜಾರಿ, ಶೈಲಜಾ ಪೂಜಾರಿ ಮೊದಲಾದವರಿದ್ದರು. ಪ್ರತೀಕ್ಷಾ ಬಹುವಾನಿತರ ಪಟ್ಟಿ ವಾಚಿಸಿದರು. ಸಂತೋಷ್ ಪೂಜಾರಿ ವರದಿ ಮಂಡಿಸಿದರು. ಚೈತ್ರಾ ಕಬ್ಬಿನಾಲೆ ಮತ್ತು ವಿನಾಯಕ್ ನಿರೂಪಿಸಿದರು. ಪ್ರಭಾಕರ ಪೂಜಾರಿ ವಂದಿಸಿದರು.
ಹೆಬ್ರಿಯಲ್ಲಿ ವಾಹನ ಜಾಥಾ, ಶ್ರೀ ಗುರುಪೂಜೆ, ಭಜನೆ ನಡೆಯಿತು. ನಿವೃತ್ತ ಯೋಧರು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಸೂರ್ಯಕಾಂತ್ ಜಯ ಸುವರ್ಣ, ನಿಗಮ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.