ಕಾರ್ಯಾಗಾರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ನಿಕಟಪೂರ್ವ ಅಧ್ಯಕ್ಷ ಮಹೇಶ್ ಕೆ.ಸವಣೂರು ಉದ್ಘಾಟಿಸಿದರು. ದಯಾನಂದ ರೈ ಮನವಳಿಕೆ, ಇಂದುಶೇಖರ ಶೆಟ್ಟಿ ಮೊದಲಾದವರಿದ್ದರು.
ಕಡಬ: ವಿದ್ಯಾರ್ಥಿ ಜೀವನದಲ್ಲಿ ಬೀಡಿ, ಸಿಗರೇಟ್, ಗುಟ್ಕ ಇನ್ನಿತರ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಿದಲ್ಲಿ ಬದುಕಿನುದ್ದಕ್ಕೂ ಒಳ್ಳೆಯ ಆರೋಗ್ಯ ಮತ್ತು ನೆಮ್ಮದಿ ಕಾಣಬಹುದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ನಿಕಟಪೂರ್ವ ಅಧ್ಯಕ್ಷ ಮಹೇಶ್ ಕೆ.ಸವಣೂರು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಘಟಕ ಆಶ್ರಯದಲ್ಲಿ ಆಲಂಕಾರು ಗ್ರಾಮದ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಅಧ್ಯಕ್ಷ ದಯಾನಂದ ರೈ ಮನವಳಿಕೆ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಸಂಪನ್ಮೂಲವ್ಯಕಿ ಸವಣೂರು ಪ್ರೌಢಶಾಲೆ ಶಿಕ್ಷಕ ಕಿಶಾನ್ ಬಿ.ವಿ. ಮಾತನಾಡಿದರು.
ಆಲಂಕಾರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಜಾತಾ, ಕಾಲೇಜಿನ ಆಡಳಿತಾಧಿಕಾರಿ ಶ್ರೀಪತಿ ರಾವ್, ಪ್ರೌಢಶಾಲೆ ಮುಖ್ಯಶಿಕ್ಷಕ ನವೀನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲೆ ರೂಪಾ ವಂದಿಸಿದರು. ಆಲಂಕಾರು ವಲಯ ಮೇಲ್ವಿಚಾರಕಿ ಲತಾ ಕಾರ್ಯಕ್ರಮ ನಿರೂಪಿಸಿದರು.