Crime 
ಉಡುಪಿ

ಬಂಗ್ಲೆಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ

ಇಂದಿರಾ ಎನ್ ಕೆ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ಲೆಗುಡ್ಡೆ ರಕ್ಷಿತಾರಣ್ಯಕ್ಕೆ ಅನುಮತಿ ಪಡೆಯದೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ನಡೆದಿದೆ.
ಯುವಕರ ವಿರುದ್ಧ ಅರಣ್ಯ ಇಲಾಖೆ ದೂರು ಅರ್ಜಿ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಯುವಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದ ಸಂದರ್ಭದಲ್ಲಿ ಅವರ ಮೇಲೆ ಯಾವುದೇ ಹಲ್ಲೆ ಅಥವಾ ತೊಂದರೆ ಉಂಟಾಗಿದ್ದರೆ ಈ ಬಗ್ಗೆ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಯುವಕರು, ಈ ಕುರಿತು ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.