ಬಿಲ್ಲವ ಸಮಾಜದ ಉದ್ಯಮಿಗಳ ಸಭೆಯಲ್ಲಿ ಉದ್ಯಮಿ ದಯಾನಂದ ಬೊಂಟ್ರ ವಾತನಾಡಿದರು. ಉದ್ಯಮಿ ಗಂಗಾಧರ ಅಮೀನ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ರಾಜಶೇಖರ್ ಕೋಟ್ಯಾನ್ ಇದ್ದರು.  
ಉಡುಪಿ

ಆಯುರ್ವೇದ ಪರಂಪರೆ ಉಳಿಸುವ ಯೋಜನೆ ಅನುಷ್ಠಾನ

ಪುತ್ತೂರು ಗ್ರಾಮಾಂತರ: ದೇಯಿ ಬೈದ್ಯೆತಿ, ಕೋಟಿಚೆನ್ನಯ ಮೂಲಸ್ಥಾನವಾದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಧಾರ್ಮಿಕತೆಯೊಂದಿಗೆ ತುಳುನಾಡಿನ ವೈದ್ಯ ಪರಂಪರೆಯ ಮೂಲ ಜನಾಂಗವಾದ ಬಿಲ್ಲವ ಸಮುದಾಯದ ಆಯುರ್ವೇದ ಪರಂಪರೆಯನ್ನು ಉಳಿಸಿ ಬೆಳೆಸುವ ಯೋಜನೆಗಳು ಹಂತ ಹಂತವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಉದ್ಯಮಿ, ಗುಜರಾತ್ ಬಿಲ್ಲವ ಸಂದ ಗೌರವಾಧ್ಯಕ್ಷ ದಯಾನಂದ ಬೊಂಟ್ರ ಹೇಳಿದರು.

ಮಾ

7 ಕೋಟಿ ರೂ. ವೆಚ್ಚದಲ್ಲಿ ಆಯುರ್ವೇದ ಕೇಂದ್ರ ಹಾಗೂ ಯಾತ್ರಿ ನಿವಾಸದ ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. ಬಿಲ್ಲವ ಸವಾಜದ ಉದ್ಯಮಿಗಳು ಹಾಗೂ ದಾನಿಗಳು ಉದಾರವಾಗಿ ಸಹಕಾರ ನೀಡುತ್ತಿದ್ದು, ಈ ಬೃಹತ್ ಯೋಜನೆ ಪೂರ್ಣಗೊಳ್ಳಲು ಇನ್ನಷ್ಟು ನೆರವಿನ ಅಗತ್ಯವಿದೆ ಎಂದು ಹೇಳಿದರು.
ಮಹಾರಾಷ್ಟ್ರ ನಾಸಿಕ್ ಉದ್ಯಮಿ ಗಂಗಾಧರ ಅಮೀನ್, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಬಿರ್ವ ವಾತನಾಡಿ, ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ವಾತನಾಡಿದರು.
ಕ್ಷೇತ್ರಾಡಳಿತ ಸಮಿತಿ ಟ್ರಸ್ಟಿ ಚಿತ್ತರಂಜನ್ ಕಂಕನಾಡಿ, ಗೌರವಾಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮಹಾಪೋಷಕರಾದ ಊರ್ಮಿಳಾ ರಮೇಶ್ ಕುವಾರ್, ಪ್ರತಿಭಾ ಕುಳಾಯಿ, ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ., ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು, ವಾಸ್ತುತಜ್ಞ ಪ್ರಮಲ್ ಕುವಾರ್ ಕಾರ್ಕಳ, ಪ್ರಮುಖರಾದ ದಿನೇಶ್ ಅಮೀನ್ ಕುಂದಾಪುರ, ನವನೀತ್, ಉಮೇಶ್ ಬಂಗೇರ ಹೇರಾಜೆ, ರಾಜೇಂದ್ರ ಚಿಲಿಂಬಿ, ನಿತ್ಯಾನಂದ ನಾವರ, ಹರೀಶ್ ಕೆ.ಪೂಜಾರಿ, ರಾಜೇಶ್ ಅಂಚನ್, ವಸಂತ ಅಂಚನ್, ಜೈವಿಕ್ರಂ ಕಲ್ಲಾಪು, ನಾರಾಯಣ ಮಚ್ಚಿನ, ಕುವಾರ್ ಇರುವೈಲ್, ಸಂತೋಷ್ ಉಗ್ಗೆಲ್‌ಬೆಟ್ಟು, ನಾಗೇಶ್ ಪೂಜಾರಿ, ಗಣೇಶ್ ಪೂಜಾರಿ, ವಿದ್ಯಾ ರಾಕೇಶ್, ಸುಧಾ ಸುರೇಶ್ ಇದ್ದರು.

ಗೆಜ್ಜೆಗಿರಿ ಕ್ಷೇತ್ರ ಕೇವಲ ಧಾರ್ಮಿಕ ಕೇಂದ್ರವಾಗಿರದೆ ಆರೋಗ್ಯ, ಶಿಕ್ಷಣ ಹಾಗೂ ಸವಾಜಮುಖಿ ಸೇವೆಗಳ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಆಯುರ್ವೇದ ಕೇಂದ್ರ ಸ್ಥಾಪನೆಯ ಮೂಲಕ ಬಿಲ್ಲವ ಸವಾಜದ ವೈದ್ಯ ಪರಂಪರೆಗೆ ಹೊಸ ಆಯಾಮ ದೊರೆಯಲಿದೆ.

— ರವಿ ಪೂಜಾರಿ ಚಿಲಿಂಬಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ