ಡಾ. ಲೆಸ್ಲಿ ಕ್ಲಿಫರ್ಡ್ ಡಿ'ಸೋಜಾ
ಉಡುಪಿ: ಕ್ರೈಸ್ತ ಧರ್ಮಪ್ರಾಂತ್ಯದ ದ್ವೀತಿಯ ಧಮಾರ್ಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿ'ಸೋಜಾ ಅಧಿಕಾರ ಸ್ವೀಕಾರ ಸಮಾರಂಭ ಏ.20ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧಮಾರ್ಧ್ಯಕ್ಷ ಕಾರ್ಡಿನಲ್ ಫಿಲಿಪ್ ನೆರಿ ಫೆರಾವೊ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಹಾಗೂ ನೂತನ ಧಮಾರ್ಧ್ಯಕ್ಷರಿಗೆ ಅಭಿಷೆೇಕ ನಡೆಯಲಿದೆ. ಬೆಂಗಳೂರು ಮಹಾಧಮಾರ್ಧ್ಯಕ್ಷ ಡಾ. ಪೀಟರ್ ಮಚಾದೊ ಹಾಗೂ ಉಡುಪಿ ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಡಾ. ಜೆರಾಲ್ಡ್ ಐಸಾಕ್ ಲೋಬೊ ಸಹ-ಅಭಿಷೇಕಕಾರರಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾರತ ಮತ್ತು ನೇಪಾಳದ ಪೋಪ್ ವ್ಯಾಟಿಕನ್ ರಾಯಭಾರಿ ಡಾ. ಲಿಯೋಪೋಲ್ಡೊ ಗಿರೆಲ್ಲಿ ಸೇರಿದಂತೆ ಸುಮಾರು 6000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಮಧ್ಯಾಹ್ನ 11.45ಕ್ಕೆ ನೂತನ ಧಮಾರ್ಧ್ಯಕ್ಷರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್ ಹಾಗೂ ಶಾಸಕ ಯಶಪಾಲ್ ಸುವರ್ಣ ನಾಗರಿಕರ ಪರವಾಗಿ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಸ್ತುತ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ 2012ರಿಂದ 2026ರವರೆಗೆ 13 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ.ಜೆರಾಲ್ಡ್ ಐಸಾಕ್ ಲೋಬೊ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಧರ್ಮಗುರು ಫರ್ಡಿನಾಂಡ್ ಗೊನ್ಸಾಲ್ವಿಸ್, ಧರ್ಮಪ್ರಾಂತ್ಯದ ಕುಲಪತಿ ಸ್ಟೀವನ್ ಡಿಸೋಜಾ, ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ಉಪಸ್ಥಿತರಿದ್ದರು.
ಧರ್ಮಪ್ರಾಂತ್ಯದಲ್ಲಿ 51 ಚರ್ಚುಗಳುಉಡುಪಿ ಧರ್ಮಕ್ಷೇತ್ರವು ಕಾರ್ಕಳ, ಕುಂದಾಪುರ, ಕಾಪು, ಬೈಂದೂರು, ಹೆಬ್ರಿ, ಬ್ರಹ್ಮಾವರ ಹಾಗೂ ಉಡುಪಿ ತಾಲೂಕುಗಳನ್ನು ಒಳಗೊಂಡಿದೆ. ಬೆಂಗಳೂರು ಮಹಾಧರ್ಮಪ್ರಾಂತ್ಯದ ಅಧೀನದಲ್ಲಿದ್ದು, ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ದೇವಾಲಯ. ಧರ್ಮಕ್ಷೇತ್ರದಲ್ಲಿ 60,338 ಕ್ಯಾಥೋಲಿಕ್ ಕುಟುಂಬಗಳು ವಾಸಿಸುತ್ತಿದ್ದು, 51 ಚರ್ಚುಗಳು, ಒಂದು ಬಸಿಲಿಕಾ, ಮೂರು ತೀರ್ಥಕ್ಷೇತ್ರಗಳು ಹಾಗೂ ಏಳು ಉಪಕೇಂದ್ರಗಳನ್ನು ಒಳಗೊಂಡಿದೆ.