ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ ಮೊದಲಾದವರಿದ್ದರು.
ಕಡಬ: ಕುದ್ಮಾರು ಗ್ರಾಮದ ಕುವೆತ್ತೋಡಿಯಲ್ಲಿ 5.50 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಕಾರ್ಯದರ್ಶಿ ಗಣೇಶ್ ಉದನಡ್ಕ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರವೀಣ್ ಕೆರೆನಾರು, ಪ್ರಮುಖರಾದ ಸುರೇಶ್ ರೈ ಸೂಡಿಮುಳ್ಳು, ಅನಿಲ್ ಖಂಡಿಗ, ಶ್ರೀಧರ ಗೌಡ ಕೊಯಕ್ಕುಡೆ, ಪ್ರವೀಣ್, ಮಹಾಬಲ ಗೌಡ, ಆನಂದ ಕೂಂಕ್ಯ, ಸತೀಶ್ ಅನ್ಯಾಡಿ ಮೊದಲಾದವರು ಉಪಸ್ಥಿತರಿದ್ದರು. ಲೋಕೇಶ್ ಬಿ.ಎನ್. ಸ್ವಾಗತಿಸಿ. ವಂದಿಸಿದರು.