ಉಡುಪಿ ಶಾಸಕ ಯಶ್ಪಾಲ್ ಸುವರ್ಣ.
ಶಾಸಕ ಯಶ್ಪಾಲ್ ಸುವರ್ಣ ಪತ್ರ
ಉಡುಪಿ: ಬಿಪಿಎಲ್ ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ ವಾರ್ಷಿಕ ಆದಾಯ ಮಿತಿ 1.20 ಲಕ್ಷ ರೂ.ವನ್ನು 3 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪ್ರಸ್ತುತ ಬಿಪಿಎಲ್ ಕಾರ್ಡ್ ಪಡೆಯಲು ಈಗಿರುವ ವಾರ್ಷಿಕ ಆದಾಯ ಮಿತಿಯನ್ನು 2017ರಲ್ಲಿ ನಿಗದಿಪಡಿಸಲಾಗಿದೆ. 9 ವರ್ಷದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಣನೀಯ ಏರಿಕೆಯಾಗಿದೆ. ಆದಾಯ ಮಿತಿ ಪರಿಷ್ಕರಿಸದ ಕಾರಣ ಬಡ ಹಾಗೂ ಕೆಳಮಧ್ಯಮ ವರ್ಗದ ಕುಟುಂಬಗಳು ಬಿಪಿಎಲ್ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.