ಕಾಸರಗೋಡು ತಾಳಿಪಡ್ಪು ಮೈದಾನದಲ್ಲಿ ರ‌್ಯಾಲಿಗೆ ಚಾಲನೆ ನೀಡಲಾಯಿತು. ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಕೆ.ಎಸ್.ರಮಣಿ, ಶ್ರೀವಿದ್ಯಾ ಇತರರು ಇದ್ದರು.
ಕಾಸರಗೋಡು: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಭಾರತಕ್ಕೆ ಪೂರ್ಣಾರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿತು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯಂತ ಸದೃಢವಾಗಿದ್ದು, ವಿಶ್ವಕ್ಕೆ ಮಾದರಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಹೇಳಿದರು.
ಸ್ವಾತಂತ್ರೊೃೀತ್ಸವ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಕಾಸರಗೋಡು ಮಂಡಲ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರಧ್ವಜ ಸಹಿತ ಬೈಕ್ ರ‌್ಯಾಲಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯೆ ಸವಿತಾ, ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪಾ ಗೋಪಾಲನ್, ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್.ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾ ಕೋಶಾಧಿಕಾರಿ ಶ್ರೀಲತಾ, ಜಿಲ್ಲಾ ಕಾರ್ಯದರ್ಶಿ ಮಮತಾ ಸಾಗರ್, ಮಂಡಲ ಪ್ರಧಾನ ಕಾರ್ಯದರ್ಶಿ ಚೇತನಾ, ಕಾರ್ಯದರ್ಶಿ ಅಶ್ವಿತಾ, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜ್ಞಾನಿ ಶಾನ್‌ಭಾಗ್ ಇತರರು ಇದ್ದರು.
ತಾಳಿಪ್ಪಡವು ಮೈದಾನದಲ್ಲಿ ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಕೆ.ಎಸ್.ರಮಣಿ ಅವರು ಮಂಡಲ ಅಧ್ಯಕ್ಷೆ ಶ್ರೀವಿದ್ಯಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ರ‌್ಯಾಲಿಗೆ ಚಾಲನೆ ನೀಡಿದರು. ಮೊಗ್ರಾಲ್ ಪುತ್ತೂರು, ಕಾಸರಗೋಡು ನಗರಸಭೆ ವ್ಯಾಪ್ತಿ ಹಾಗೂ ಮಧೂರು ಭಾಗದಲ್ಲಿ ಬೈಕ್ ರ‌್ಯಾಲಿ ಸಂಚರಿಸಿತು.