ವಿಕಸಿತ ಭಾರತ ಸವಾವೇಶವನ್ನು ಅಶ್ವಿನಿ ಎಂ.ಎಲ್.ಉದ್ಘಾಟಿಸಿದರು. ಮನುಲಾಲ್ ಮೇಲತ್, ಪಿ.ಆರ್.ಸುನೀಲ್, ಎಂ.ಬಲರಾಜ್ ಮೊದಲಾದವರಿದ್ದರು.
ಕಾಸರಗೋಡು: ಆರ್ಥಿಕತೆಯಲ್ಲಿ ವಿಶ್ವದಲ್ಲೇ ಹತ್ತನೇ ಸ್ಥಾನದಲ್ಲಿದ್ದ ಭಾರತವನ್ನು ಹನ್ನೆರಡು ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವ ಮತ್ತು ಅವಿರತ ಶ್ರಮ ಕಾರಣ ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಅಭಿಪ್ರಾಯಪಟ್ಟರು.
ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ನವ ಭಾರತ ವೇದಿಕೆ ಎಂಬ ಹೆಸರಿನಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿಕಸಿತ ಭಾರತ ಸವಾವೇಶ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನುಲಾಲ್ ಮೇಲತ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನೀಲ್, ಜಿಲ್ಲಾ ಉಪಾಧ್ಯಕ್ಷ ಎಂ.ಬಲರಾಜ್, ಪ್ರಮುಖರಾದ ಕುಞಿಕಣ್ಣನ್ ಬಳಾಲ್, ಲೋಕೇಶ್ ನೋಂಡ, ವೀಣಾ ಅರುಣ್ ಶೆಟ್ಟಿ, ಸುಕುವಾರ್ ಕುದ್ರೆಪ್ಪಾಡಿ, ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಸ್ಮರಣೆ ಮಾಡಲಾಯಿತು.