ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮದಲ್ಲಿ ಬ್ಲೂಲೈನ್ ಸಂಸ್ಥೆ ಆಡಳಿತ ನಿರ್ದೇಶಕ ಮಹಮ್ಮದ್ ಶೌಕತ್ ಶೌರಿ ಮಾತನಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್., ಅರೆಬಿಯನ್ ಸೀ ಫಿಶರೀಸ್ ಮ್ಯಾನೇಜ್‌ಮೆಂಟ್ ಕೋ-ಆರ್ಡಿನೇಷನ್ ಕಮಿಟಿ ಆಡಳಿತ ನಿರ್ದೇಶಕ ಡಾ.ಶಿವಕುಮಾರ್ ಮಗದ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ತಪಾಸಣೆ ನಡೆಸುವುದು ಮುಖ್ಯ. ಇದರಿಂದ ಆರಂಭಿಕ ಹಂತದಲ್ಲೇ ರೋಗ ಪತ್ತೆಹಚ್ಚಲು ಸಾಧ್ಯ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್. ಹೇಳಿದರು.
ಬ್ಲೂಲೈನ್ ಫುಡ್ಸ್ ಇಂಡಿಯಾ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಸಹಯೋಗದಲ್ಲಿ ಕಂಬಳಪದವು ಖಾಸಗಿ ಸಭಾಂಗಣದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಬಿರದಲ್ಲಿ ಚರ್ಮ, ದಂತ, ಕೀಲುರೋಗ ಪರೀಕ್ಷೆ, ಸ್ತ್ರೀರೋಗ ಸಮಾಲೋಚನೆ, ರಕ್ತದಾನ, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ, ಕನ್ನಡಕ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಸಾಮಾನ್ಯ ಆರೋಗ್ಯ ತಪಾಸಣೆ ನಡೆಯಿತು.
ಫಾದರ್ ಮುಲ್ಲರ್ ಆಸ್ಪತ್ರೆ ಆರೋಗ್ಯ ಕಾರ್ಡ್ ವಿತರಿಸಲಾಯಿತು. ಬ್ಲೂಲೈನ್ ಸಂಸ್ಥೆ ಆಡಳಿತ ನಿರ್ದೇಶಕ ಮಹಮ್ಮದ್ ಶೌಕತ್ ಶೌರಿ ಅಧ್ಯಕ್ಷತೆ ವಹಿಸಿದ್ದರು. ಅರೆಬಿಯನ್ ಸೀ ಫಿಶರೀಸ್ ಮ್ಯಾನೇಜ್‌ಮೆಂಟ್ ಕೋ-ಆರ್ಡಿನೇಷನ್ ಕಮಿಟಿ ಆಡಳಿತ ನಿರ್ದೇಶಕ ಡಾ.ಶಿವಕುಮಾರ್ ಮಗದ, ನಿರ್ದೇಶಕ ರಮೇಶ್ ಎಂ.ಆರ್., ಫಾದರ್ ಮುಲ್ಲರ್ ಆಸ್ಪತ್ರೆ ಡಾ.ಮಿಷಲ್ ಫರ್ನಾಂಡಿಸ್, ನಡುಪದವು ಮಸೀದಿ ಅಧ್ಯಕ್ಷ ಎನ್.ಎಸ್.ನಾಸಿರ್ ನಡುಪದವು, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ನಿರ್ದೇಶಕ ಮಹಮ್ಮದ್ ಫಕೀರ್ ಹುಸೈನ್ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಾಪಂ ಮಾಜಿ ಸದಸ್ಯ ಹೈದರ್ ಕೈರಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನುಗಾರಿಕಾ ಕಾಲೇಜಿನ ಶೀತಲ್ ವಂದಿಸಿದರು. ಬಬಿತಾ ನಿರೂಪಿಸಿದರು.