ಉಡುಪಿ: ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮತ್ತು ಗೌರವ ಇರಬೇಕು. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸತಿಯ ಶ್ರೀಮಂತಿಕೆಯ ಅರಿವು ಮೂಡಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಚಿನ್ನಸ್ವಾಮಿ ಸಲಹೆ ನೀಡಿದರು.
ಉಡುಪಿ ಅಜ್ಜರಕಾಡು ಡಾ. ಜಿ.ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಭಾಗಿತ್ವದಲ್ಲಿ ಕಾಲೇಜ್ನ ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕಲಾಪ್ರತಿಭೋತ್ಸವದ ನಿಮಿತ್ತ ಶುಕ್ರವಾರ (ನ.6) ಆಯೋಜಿಸಿದ್ದ 'ಅರಿವಿನ ಬೆಳಕು ಉಪನ್ಯಾಸ-20' ಹಾಗೂ ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಕಾಲೇಜ್ನ ಪ್ರಾಂಶುಪಾಲೆ ಪ್ರೊ. ಡಾ.ನಿಕೇತನಾ ಮಾತನಾಡಿ, ಕನ್ನಡ ನಾಡು-ನುಡಿಯ ಹಬ್ಬ ಆಚರಿಸುವುದು ಶಿವರಾಮ ಕಾರಂತರಿಗೆ ನಾವೆಲ್ಲ ಸಲ್ಲಿಸುವ ಗೌರವವಾಗಿದೆ ಎಂದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ನಿವೃತ್ತ ಪ್ರಾಧ್ಯಾಪಕ ದಯಾನಂದ ಡಿ., ರೇಡಿಯೋ ಕುಂದಾಪುರ ಆರ್ಜೆ ಜ್ಯೋತಿ ಸಾಲಿಗ್ರಾಮ, ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯೆ ಭಾರತಿ ಮರವಂತೆ ಉಪಸ್ಥಿತರಿದ್ದರು.
ಡಾ. ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿದರು. ಸಾಂಸ್ಕೃತಿಕ ಸಂಚಾಲಕಿ ಆಶಾ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಅರ್ಚನಾ ನಾಯಕ ಕಾರ್ಯಕ್ರಮ ನಿರೂಪಿಸಿದರು.
ಎರಡು ಸಾವಿರಕ್ಕೂ ಅಧಿಕ ವರ್ಷದ ಹಿನ್ನೆಲೆಯುಳ್ಳ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಇತಿಹಾಸವನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಡೆಯಬೇಕು. ಇಂತಹ ಕಾರ್ಯಕ್ರಮವು ಕನ್ನಡ ಪ್ರತಿಭೆಗಳ ಸೃಷ್ಟಿಗೆ ಪ್ರೇರಣೆಯಾಗಲಿದೆ. ಕನ್ನಡವೆಂದರೆ ಅದು ಅರಿವಿನ ಬೆಳಕು.ಡಾ. ಗಣನಾಥ ಶೆಟ್ಟಿ ಎಕ್ಕಾರು. ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ.