Rain 
ಉಡುಪಿ

ತಾಲೂಕಿನಲ್ಲಿ ಚುರುಕುಗೊಂಡ ಮಳೆ

ಕುಂದಾಪುರ: ಕಳೆದ ಹಲವಾರು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆರಾಯ ಗುರುವಾರ ರಾತ್ರಿಯಿಂದ ಬೊಬ್ಬಿರಿದು ಸುರಿಯುತ್ತಿದ್ದಾನೆ. ಕುಂದಾಪುರ ತಾಲೂಕಿನಾದ್ಯಂತ ಗುರುವಾರ ರಾತ್ರಿಯಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆಗಾಗಿ ಪ್ರಾರ್ಥಿಸುತ್ತಿದ್ದ ಕೃಷಿಕರ ಮೊಗದಲ್ಲಿ ಮಂದಹಾಸ ಬೀರಿದೆ.
ಬಿಟ್ಟು ಬಿಟ್ಟು ಭಾರಿ ಮಳೆಯಾಗುತ್ತಿದ್ದು, ಎಲ್ಲೆಡೆ ಮಳೆ ನೀರು ನಿಂತಿದೆ. ಅನೇಕ ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿದೆ. ಚರಂಡಿ ಅವ್ಯವಸ್ಥೆಯಿಂದ ಕುಂದಾಪುರದ ಸರ್ವೀಸ್ ರಸ್ತೆ ಹಾಗೂ ಇನ್ನಿತರ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಮೇಲೆ ಮಳೆ ನೀರು ಹರಿದು ಜನಸಾವಾನ್ಯರಿಗೆ ತೊಂದರೆಯನ್ನುಂಟು ಮಾಡಿದೆ.
ಹೊಲಗದ್ದೆಗಳಲ್ಲಿ ನೀರಿಲ್ಲದೆ ಒಣಗಿ ಹೋಗುತ್ತಿದ್ದ ಭತ್ತದ ಗಿಡಗಳಿಗೆ ಮಳೆರಾಯ ಕೃಪೆ ತೋರಿದ್ದಾನೆ. ಗದ್ದೆಗಳಿಗೆ ಸಾಕಷ್ಟು ಪ್ರವಾಣದಲ್ಲಿ ಮಳೆ ನೀರು ಹರಿದು ಬರುತ್ತಿದ್ದು, ಕೃಷಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.