ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು. ಶಿವಾನಂದ ಶಾಂತಿ, ಉದ್ಯಮಿ ಪ್ರಭಾಕರ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಮೊದಲಾದವರಿದ್ದರು.
ವಿಜಯವಾಣಿ ಸುದ್ದಿಜಾಲ ಮೂಲ್ಕಿ
ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ಧಾರ್ಮಿಕ ಸಂಘ ಸಂಸ್ಥೆಗಳು ಮತ್ತು ಪಾಲಕರಿಂದ ಆಗಬೇಕು ಎಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ತಂತ್ರಿ ಶಿವಾನಂದ ಶಾಂತಿ ಹೇಳಿದರು.
ಮೂಲ್ಕಿ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 17ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ಧಾರ್ಮಿಕ ಸಭೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಉಡುಪಿ ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಯಮಿ ಪ್ರಭಾಕರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಪ್ರವೀಣ್ ಕುಮಾರ್ ಬೊಳ್ಳೂರು, ಮೂಲ್ಕಿ ಪ್ರಬೋದ್ ಕುಡ್ವ, ಮಂತ್ರ ಸರ್ಫ್ ಕ್ಲಬ್‌ನ ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೊಳಚಿಕಂಬಳ ಶ್ರೀ ಜಾರಂದಾಯ ದೈವಸ್ಥಾನ ಗುರಿಕಾರರಾದ ಹರೀಶ್ಚಂದ್ರ ಪಿ.ಸಾಲ್ಯಾನ್, ತೇಜ ಪೂಜಾರಿ, ಪ್ರಾಣೇಶ್ ಪೂಜಾರಿ, ಕೃಷ್ಣ ಕೋಟ್ಯಾನ್, ದೈವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಸುವರ್ಣ, ಉಪಾಧ್ಯಕ್ಷ ಹೇಮನಾಥ ಕೋಟ್ಯಾನ್, ಮಹಿಳಾ ಮಂಡಳಿ ಅಧ್ಯಕ್ಷೆ ಲತಾ ಶೇಖರ್, ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ಅಧ್ಯಕ್ಷ ಚರಣ್ ಬಂಗೇರ, ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕೋಟ್ಯಾನ್, ಕೋಶಾಧಿಕಾರಿ ಸುನೀಲ್ ಕೋಟ್ಯಾನ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ, ಲಕುಮಿ ತಂಡದಿಂದ ಆಂಟಿ ಬೊಕ್ಕ ಅಂಕಲ್ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಯೂತ್ ಕ್ಲಬ್ ಅಧ್ಯಕ್ಷ ಚರಣ್ ಬಂಗೇರ ಸ್ವಾಗತಿಸಿದರು, ಹರೀಶ್ಚಂದ್ರ ಪಿ.ಸಾಲ್ಯಾನ್ ಪ್ರಸ್ತಾವನೆಗೈದರು, ಲತಾ ಶೇಖರ್ ವಂದಿಸಿದರು, ಕಾರ್ತಿಕ್ ನಿರೂಪಿಸಿದರು.
ಸನ್ಮಾನ, ಸ್ಕಾಲರ್‌ಶಿಪ್ ವಿತರಣೆ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸಿಂಧು ಗುಜರನ್, ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ ನಿತ್ಯ ಅರ್ಚಕ ನಿರಂಜನ್ ಪೂಜಾರಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವ ನರ್ತಕ ಭಾಸ್ಕರ್ ಬಂಗೇರ ಪಡುಬಿದ್ರಿ, ಜಯಕೃಷ್ಣ ಕೋಟ್ಯಾನ್ ಮತ್ತು ದೈವದ ಪರಿಚಾರಕ ಮಾಧವ ಮಡಿವಾಳ ಚಿತ್ರಾಪು ಅವರನ್ನು ಸನ್ಮಾನಿಸಲಾಯಿತು. ಕೊಳಚಿಕಂಬಳ ಸಾನದಮನೆ ದಿ.ರಾಮಣ್ಣ ಪೂಜಾರಿ ಮತ್ತು ದಿ.ಹರಿಯಪ್ಪ ಕೋಟ್ಯಾನ್ ಸ್ಮರಣಾರ್ಥ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಮೂಲಕ ವಿದ್ಯಾರ್ಥಿವೇತನ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಸಾಧಕರನ್ನು, ದಾನಿಗಳನ್ನು ಗೌರವಿಸಲಾಯಿತು.