ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಸಹಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್.
* ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ
ಉಡುಪಿ: ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಸಹಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ಆಯ್ಕೆಯಾಗಿದ್ದಾರೆ.
ಉಡುಪಿಯ ಮಥುರಾ ಕಂಫರ್ಟ್ಸ್ ಸಭಾಂಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ಯು.ವಿಶ್ವನಾಥ್ ಶೆಣೈ, ನಿವೃತ್ತ ಬ್ಯಾಂಕ್ ಅಧಿಕಾರಿ ಸಿ.ಎಸ್. ರಾವ್, ಕಸಾಪ ಉಡುಪಿ ತಾಲೂಕು ಘಟಕ ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್, ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ ಉಪಸ್ಥಿತರಿದ್ದರು.
ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗದಲ್ಲಿ ಮೇ 3ರಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲಾಗುವುದು. ಸಮ್ಮೇಳನ ಸರ್ವಾಧ್ಯಕ್ಷರಾಗಿ ಖ್ಯಾತ ವೈದ್ಯ, ಸಾಹಿತಿ, ಕಲಾವಿದರೂ ಆದ ಡಾ. ಭಾಸ್ಕರಾನಂದ ಕುಮಾರ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.