ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್​.ಆರ್​. ಹೆಗ್ಡೆ ಸ್ಮರಣಾರ್ಥ ಜಂಟಿ ಪ್ರಶಸ್ತಿ ಸ್ವೀಕರಿಸಲಿರುವ ಹಿರಿಯ ವಿದ್ವಾಂಸ ಮಂಗಳೂರಿನ ಡಾ. ಬಿ. ಶಿವರಾಮ್​ ಶೆಟ್ಟಿ. 
ಉಡುಪಿ

ಪೊಳಲಿ, ಎಸ್​.ಆರ್​. ಹೆಗ್ಡೆ ಪ್ರಶಸ್ತಿ ಪ್ರದಾನ ಜೂ.20ಕ್ಕೆ

ಹಿರಿಯ ವಿದ್ವಾಂಸ ಡಾ. ಬಿ. ಶಿವರಾಮ್​ ಶೆಟ್ಟಿಗೆ ಸನ್ಮಾನ

ಉಡುಪಿ: ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್​.ಆರ್​. ಹೆಗ್ಡೆ ಸ್ಮರಣಾರ್ಥ ನೀಡುವ 2026ನೇ ಸಾಲಿನ ಜಂಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. 20ರಂದು ಬೆಳಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಹಿರಿಯ ಲೇಖಕ, ಸಂಶೋಧಕ ಹಾಗೂ ಹಿರಿಯ ವಿದ್ವಾಂಸ ಮಂಗಳೂರಿನ ಡಾ. ಬಿ. ಶಿವರಾಮ್​ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪ್ರೊ. ಬಿ.ಎ. ವಿವೇಕ್​ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಚೇತನ್​ ಮುಂಡಾಜೆ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿದ್ದು, ಪ್ರಶಸ್ತಿ ಪುರಸ್ಕೃತ ಡಾ. ಬಿ. ಶಿವರಾಮ್​ ಶೆಟ್ಟಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ, ಚೇಳೈರುಗುತ್ತು ಎಸ್​.ಆರ್​. ಹೆಗ್ಡೆ ಚಾರಿಟೇಬಲ್​ ಟ್ರಸ್ಟ್​ನ ಅಧ್ಯಕ್ಷೆ ಡಾ. ಇಂದಿರಾ ಹೆಗ್ಡೆ ಪಾಲ್ಗೊಳ್ಳಲಿದ್ದಾರೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್​ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.