ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದರು.
ಉಡುಪಿ: ಪತ್ರಕರ್ತರು ಸದಾ ಕಾಲ ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ. ಇದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು. ನಿಯಮಿತ ಆಹಾರ ಸೇವನೆ, ವ್ಯಾಯಾಮಕ್ಕೆ ಆದ್ಯತೆ ನೀಡಬೇಕು ಎಂದು ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದ್ದಾರೆ.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮೃತ್ ಡಯಾಗ್ನಸ್ಟಿಕ್ ಸೆಂಟರ್ ಸಹಯೋಗದೊಂದಿಗೆ ಮಂಗಳವಾರ ಸಂಘದ ಸದಸ್ಯರಿಗೆ ಹಮ್ಮಿಕೊಳ್ಳಲಾದ ನಾಲ್ಕು ದಿನಗಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್ ಶೆಟ್ಟಿ, ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಅಮೃತ್ ಡಯಾಗ್ನಸ್ಟಿಕ್ ಸೆಂಟರ್ ಮುಖ್ಯಸ್ಥ ಸತೀಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು. ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು.