ಕನ್ನಡ ಸಾಹಿತ್ಯದ ಸಂಗೀತ ವೈವಿಧ್ಯತೆಯನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸಿದ ಅಪರೂಪದ ಪ್ರಯೋಗವೇ ಕನ್ನಡ ಗಾನಗುಚ್ಛ ಕಾರ್ಯಕ್ರಮ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಕನ್ನಡ ಸಾಹಿತ್ಯದ ಸಂಗೀತ ವೈವಿಧ್ಯತೆಯನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸಿದ ಅಪರೂಪದ ಪ್ರಯೋಗವೇ ಕನ್ನಡ ಗಾನಗುಚ್ಛ ಕಾರ್ಯಕ್ರಮ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನರಾಮ್ ಸುಳ್ಯ ಸಂಯೋಜನೆಯಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಎರಡು ಗಂಟೆಗಳ ಕನ್ನಡ ಗಾನಗುಚ್ಛ ಕಾರ್ಯಕ್ರಮವನ್ನು ವೀಕ್ಷಿಸಿ ಮಾತನಾಡಿದರು.
28 ವೈವಿಧ್ಯಮಯ ಗೀತೆಗಳನ್ನು ಪ್ರಸ್ತುತಪಡಿಸಲಾಯಿತು. ಕಂದಪದ್ಯ, ರಂಗಗೀತೆ, ಜಾನಪದ ಗೀತೆ, ಮಕ್ಕಳ ಗೀತೆ, ಜೋಗುಳ, ವಚನ, ದಾಸರ ಪದ, ಭಜನೆ, ಕವ್ವಾಲಿ, ಗೀಗಿಪದ, ಕಂಸಾಳೆ ಪದ, ಸೋಲಿಗರ ಹಾಡು, ಮಂಟೇಶ್ವರ ಸ್ವಾಮಿಯ ಪದ್ಯ ಹಾಗೂ ತುಳು ಪಾಡ್ದನ ಸೇರಿದಂತೆ ಕನ್ನಡದ ವಿವಿಧ ಸಂಗೀತ ಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸಲಾಯಿತು.
ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನರಾಮ್ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ವಿವಿಧ ಗೀತೆಗಳನ್ನು ಪ್ರಸ್ತುತಪಡಿಸಿದರು.