ಕಾಪು ಕಡಲ ಪರ್ಬ ಅಟಲ್ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಪ್ರಚಾರ ಫಲಕ ಬಿಡುಗಡೆ ಮಾಡಲಾಯಿತು. 
ಉಡುಪಿ

26ರಿಂದ ಕಾಪು ಕಡಲ ಪರ್ಬ ಅಟಲ್ ಉತ್ಸವ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಿಪೇಯಿ ಜನ್ಮಶತಾಬ್ದಿ ಪ್ರಯುಕ್ತ ಡಿ.26, 27 ಮತ್ತು 28ರಂದು ಕಾಪು ಲೈಟ್‌ಹೌಸ್ ಬೀಚ್‌ನಲ್ಲಿ ನಡೆಯಲಿರುವ ‘ಕಾಪು ಕಡಲ ಪರ್ಬ-ಅಟಲ್ ಉತ್ಸವ’ದ ಪೂರ್ವಭಾವಿ ಸಭೆ ಮತ್ತು ಪ್ರಚಾರ ಫಲಕ ಬಿಡುಗಡೆ ಕಾರ್ಯಕ್ರಮ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಅಟಲ್ ಉತ್ಸವ ಪ್ರಯುಕ್ತ ಬೀಚ್‌ನಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ಸಹಿತ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ವಿಪಕ್ಷ ನಾಯಕರು, ಉಡುಪಿ ಮತ್ತು ದ.ಕ. ಸಂಸದರು, ಶಾಸಕರ ಸಹಿತ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ವಾಜಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಗೋಪಾಲಕಷ್ಣ ರಾವ್ ವಂದಿಸಿದರು.

ಗಣ್ಯರಿಗೆ ಗೌರವ, ಸಾಧಕರಿಗೆ ಪುರಸ್ಕಾರ

ವಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ್ ಜೆ.ಸುವರ್ಣ ಸಹಿತ ಐದು ಮಂದಿ ಸಾಧಕರಿಗೆ ಅಟಲ್ ಸಾಧನಾ ಪ್ರಶಸ್ತಿ, ಕಾಪು ಕ್ಷೇತ್ರದ ಮೂವತ್ತು ಸಾಧಕರಿಗೆ ವಿಶೇಷ ಪುರಸ್ಕಾರ ನೀಡಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಹಿತಿ ನೀಡಿದರು.