* ಜಗನ್ ಪವಾರ್ ನಿರ್ದೇಶನದಲ್ಲಿ 'ನಾನು ಕಾರಂತ' ನಾಟಕ
* ಲೇಖಕಿ ಡಾ.ರೇಖಾ ಬನ್ನಾಡಿ ಅವರಿಂದ ಉಪನ್ಯಾಸ
ಉಡುಪಿ: ಮಂಗಳೂರು ವಿಶ್ವವಿದ್ಯಾಲಯ, ಮಂಗಳ ಗಂಗೋತ್ರಿ, ಡಾ. ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ 'ಡಾ.ಶಿವರಾಮ ಕಾರಂತರ ಬದುಕು-ಬರಹ, ಸಂಶೋಧನೆಗಳ ಸಾಧ್ಯತೆಗಳು' ಕುರಿತು ಜೂ.16ರಂದು ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ವಿಚಾರ ಸಂಕಿರಣ ಮತ್ತು 'ನಾನು ಕಾರಂತ' ನಾಟಕ ಪ್ರದರ್ಶನ ನಡೆಯಲಿದೆ.
ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಚಿನ್ನಪ್ಪ ಗೌಡ ಉದ್ಘಾಟಿಸಿಲಿದ್ದು, ಡಾ, ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರಿನ ನಿರ್ದೇಶಕ ಪ್ರೊ.ನಾಗಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಡಾ.ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ್ ಶೆಟ್ಟಿ ಎಕ್ಕಾರು ಆಶಯ ನುಡಿ, ಹಿರಿಯ ಸಂಶೋಧಕಿ ಮತ್ತು ಲೇಖಕಿ ಡಾ.ರೇಖಾ ಬನ್ನಾಡಿ ಅವರಿಂದ ಉಪನ್ಯಾಸ ನೀಡಲಿದ್ದಾರೆ. ಖ್ಯಾತ ಕವಯತ್ರಿ ಡಾ.ಜ್ಯೋತಿ ಗುರುಪ್ರಸಾದ್, ಚಿಂತಕಿ ಡಾ.ನಿಕೇತನಾ, ಸಂಶೋಧಕಿ ಶಾಲಿನಿ ಯು.ಬಿ., ಹಿರಿಯ ಲೇಖಕಿ ರಾಜಶ್ರೀ ಟಿ. ಪೆರ್ಲ ಪ್ರತಿಕ್ರಿಯೆ ನೀಡಲಿದ್ದಾರೆ.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ. ಗಾಂವಕರ್, ಕನ್ನಡ ವಿಭಾಗ ಮುಖ್ಯಸ್ಥೆ ರತ್ನಮಾಲಾ, ಮಂಗಳೂರು ವಿಶ್ವವಿದ್ಯಾನಿಲಯದ ಎಸ್ವಿಪಿ ಕನ್ನಡ ಅಧ್ಯಯನ ಕೇಂದ್ರದ ಉಪನ್ಯಾಸಕ ಡಾ.ಧನಂಜಯ್ ಕುಂಬ್ಳೆ, ಹಿರಿಯ ಪ್ರಾಧ್ಯಪಕ ಪ್ರೊ. ಸೋಮಣ್ಣ ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾಲಯದಿಂದ, ಜಗನ್ ಪವಾರ್ ನಿರ್ದೇಶನದಲ್ಲಿ ರಾಜಶ್ರೀ ಪೆರ್ಲ ರಚನೆಯ 'ನಾನು ಕಾರಂತ' ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.