* ಕ್ರಮ ಕೈಗೊಂಡ ಉಡುಪಿ ಎಸ್ಪಿ ಹರಿರಾಮ್ ಶಂಕರ್
* ಪಿಐ ಸಂದೀಪ್, ಸಿಬ್ಬಂದಿಯೂ ಸಸ್ಪೆಂಡ್
ಉಡುಪಿ: ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋಕ್ಕೆ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅಮಾನತು ಮಾಡಿದೆ.
ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪಿಐ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ್ ಅಮಾನತುಗೊಂಡವರು.
ಪ್ರಕರಣವೊಂದಕ್ಕೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೋ ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದರು. ಅದರ ಆಧಾರದ ಮೇಲೆ ಮೂವರನ್ನೂ ಇಲಾಖಾ ಶಿಸ್ತು ಕ್ರಮ ಬಾಕಿ ಇರುವವರೆಗೆ ಅಮಾನತು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಮ್ ಶಂಕರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.