ಕಿದಿಯೂರು ಉದಯಕುಮಾರ್ ಶೆಟ್ಟಿ
ಉಡುಪಿ: ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಜುಲೈ 29ರಂದು ಮಧ್ಯಾಹ್ನ 3.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವೀರಭದ್ರ ಸಭಾಭವನದಲ್ಲಿ ಸಭಾ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಶ್ಯಾಮಿಲಿ ಸಮೂಹ ಸಂಸ್ಥೆಯ ಸಂಸ್ಥಾಪಕ ನಾಡೋಜ ಡಾ. ಜಿ. ಶಂಕರ್, ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕ ಡಾ. ಕೆ. ಪ್ರಕಾಶ್ ಶೆಟ್ಟಿ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಲಿ, ಗುರುರಾಜ ಗಂಟಿಹೊಳೆ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಉಪಾಧ್ಯಕ್ಷೆ ಪ್ರಣಿತ ಶರದ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಿತಾ, ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದರು.