ಕುಂಬಳೆ: ಹದಿನೇಳರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದ ಪೋಕ್ಸೋ ಆರೋಪಿ ಕುಂಬಳೆಯ ಆಟೋ ಚಾಲಕ ಬಾವಲಿಮನ ಅಮೀರ್ ಮಂಜಿಲ್‌ನ ಅಬುತಾಹಿರ್ (22) ಎಂಬಾತನನ್ನು ವಿದ್ಯಾನಗರ ಠಾಣೆ ಇನ್‌ಸ್ಪೆಕ್ಟರ್ ಎಂ.ಪಿ.ವಿಜೀಶ್ ಬಂಧಿಸಿದ್ದಾರೆ.
ವಿದ್ಯಾನಗರ ಠಾಣೆ ವ್ಯಾಪ್ತಿಯ 17ರ ಹರಯದ ಬಾಲಕಿಗೆ 2022-2023ರ ಅವಧಿಯಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಬುತಾಹಿರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯವರು ಬಾಲಕಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಅಬುತಾಹಿರ್ ಎಂಬ ವ್ಯಕ್ತಿಯೊಂದಿಗೆ ನಿರಂತರ ಚಾಟಿಂಗ್‌ನಲ್ಲಿರುವುದು ಕಂಡುಬಂದಿತ್ತು. ನಂತರ ಬಾಲಕಿಯನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿದಾಗ ವಿಷಯ ಬಹಿರಂಗಗೊಂಡಿದೆ.
ಬಾಲಕಿ ಮನೆಯವರು ವಿದ್ಯಾನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.