ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಮಾತನಾಡಿದರು.
ಉಡುಪಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣದ ಮೂಲಕ ಉನ್ನತ ಸ್ಥಾನ ಪಡೆಯಬೇಕು. ಆಯುರ್ವೇದ ಕ್ಷೇತ್ರದಲ್ಲಿ ಮಹತ್ವದ ಸಾಧನೆಗಳನ್ನು ಮಾಡಬೇಕು ಎಂದು ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಹೇಳಿದರು.
ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಮಾತನಾಡಿ, ರೋಗಿಗಳಿಗೆ ಚಿಕಿತ್ಸೆ ನೀಡುವುದಷ್ಟೇ ಅಲ್ಲದೆ ಸಂಶೋಧನೆ ಕ್ಷೇತ್ರಗಳಲ್ಲಿಯೂ ಯುವ ವೈದ್ಯರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ. ನಾಗರಾಜ್ ಎಸ್., ಸಾಂಸತಿಕ ವಿಭಾಗದ ಮುಖ್ಯಸ್ಥೆ ಡಾ. ರಮಾದೇವಿ ಜಿ., ಸ್ನಾತಕೋತ್ತರ ವಿಭಾಗದ ಡೀನ್ ಡಾ. ಶ್ರೀಕಾಂತ್ ಪಿ., ಸ್ನಾತಕೋತ್ತರ ವಿದ್ಯಾರ್ಥಿ ಪ್ರತಿನಿಧಿ ಡಾ. ಯಜ್ನೇಶ್ ದರ್ಬಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಲಿಂಗಪ್ಪ ಸ್ವಾಗತಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ. ಪ್ರಶಾಂತ್ ಕೆ. ವಾರ್ಷಿಕ ವರದಿ ವಾಚನ ಮಾಡಿದರು.
ಸ್ನಾತಕ ವಿಭಾಗದ ಡೀನ್ ಡಾ. ಪ್ರಥ್ವಿರಾಜ್ ಪುರಾಣಿಕ್ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಸಹಪ್ರಾಧ್ಯಾಪಕಿ ಡಾ. ಸಹನಾ ಶಂಕರಿ, ಸಹಾಯಕ ಪ್ರಾಧ್ಯಾಪಕಿ ಡಾ. ಸುಷ್ಮಾ ಹಾಗೂ ಡಾ. ಕೊಚ್ಚುತೆರೇಸಿಯಾ ಜೋಸ್ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸ್ನಾತಕೋತ್ತರ ವಿದ್ಯಾರ್ಥಿ ಉಪಪ್ರತಿನಿಧಿ ಡಾ. ದೀಕ್ಷಾ ಜೋಗಿ ಶುಭ ಸಂದೇಶ ವಾಚಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಧನ್ಯತಾ ಎನ್. ವಂದಿಸಿದರು. ವಿದ್ಯಾರ್ಥಿಗಳಾದ ಇಶಾ ಹಾಗೂ ಪ್ರವಿಣ್ ಕಾರ್ಯಕ್ರಮ ನಿರೂಪಿಸಿದರು.