ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಪೆರಾಬೆಯ ಪ್ರಸಾದ್ ಶೆಟ್ಟಿ ಎಂಬುವರ ಮನೆಯಲ್ಲಿ ಕೆಲಸಕ್ಕಿದ್ದ ಕೂಲಿ ಕಾರ್ಮಿಕ ಶಂಕರ್ ಲಮಾಣಿ(55) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
10 ವರ್ಷಗಳಿಂದ ಕೆಲಸಕ್ಕಿದ್ದರು. ಕುಡಿತದ ಚಟ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಬುಧವಾರ ಶಂಕರ್ ಲಮಾಣಿ ತಮ್ಮ ಜಮೀನಿನಲ್ಲಿರುವ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಸಾದ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.