ಬಂಟ್ವಾಳ: ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕಕ್ಯಪದವಿನ ಯುವತಿ ಲಾವಣ್ಯಾ ಗೌಡಳನ್ನು ಹತ್ಯೆಗೈದ ಆರೋಪಿ ಗೇರುಕಟ್ಟೆಯ ಚೇತನ್‌ನನ್ನು ಗುರುವಾರ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆ.12ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಚೇತನ್‌ನನ್ನು ಕೃತ್ಯ ನಡೆದ ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ಖರೀದಿಸಿದ ಉಪ್ಪಿನಂಗಡಿಯ ಅಂಗಡಿ ಸಹಿತ ವಿವಿಧೆಡೆಗೆ ಕರೆದೊಯ್ದು ಸ್ಥಳ ಮಹಜರು ಪ್ರಕ್ರಿಯೆಯನ್ನು ಪೊಲೀಸರ ತನಿಖಾ ತಂಡ ಪೂರ್ಣಗೊಳಿಸಿದೆ. ಬಳಿಕ ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಯಿತು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಜು.16ರಂದು ಸಂಜೆ 5.45ರ ಹೊತ್ತಿಗೆ ಮನೆಗೆ ತೆರಳಲೆಂದು ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಲಾವಣ್ಯಾಳನ್ನು ಚೇತನ್ ಮಚ್ಚಿನಿಂದ ಕಡಿದು ಹತ್ಯೆಗೈದು ಕಾರಿನಲ್ಲಿ ಪರಾರಿಯಾಗಿದ್ದನು. ಮರುದಿನ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದನು.