ಉಡುಪಿ: ಅಂಬಾಗಿಲು ಜಂಕ್ಷನ್ನಲ್ಲಿ ಶೀರೂರು ಪರ್ಯಾಯ ಸ್ವಾಗತ ಸಮಿತಿ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರಶುರಾಮ ದ್ವಾರಕ್ಕೆ ಭಾವೀ ಪರ್ಯಾಯ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ , ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ , ಮಠದ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯ, ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವೀಣಾ ಶೆಟ್ಟಿ, ಶ್ರೀಶ ಕಡೆಕಾರ್, ಬಾಲಾಜಿ ರಾಘವೇಂದ್ರ ಆಚಾರ್ಯ, ವಿಷ್ಣುಮೂರ್ತಿ ಪಾಡಿಗಾರ್, ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಮಧುಕರ್ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.