ನಾಲ್ಯಪದವು ಶಕ್ತಿನಗರ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಲಾದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಯಮಿ ಸಾಗರಿಕ ಪಕ್ಷಿಕೆರೆ ಧನಂಜಯ ಪಿ.ಶೆಟ್ಟಿಗಾರ ಉದ್ಘಾಟಿಸಿದರು. ಚೇಳ್ಯಾರು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ಚಂದ್ರನಾಥ ಎಂ., ಕಾಲೇಜು ಪ್ರಾಂಶುಪಾಲ ಜಯಾನಂದ ಎನ್.ಸುವರ್ಣ ಮೊದಲಾದವರಿದ್ದರು.
ಗುರುಪುರ: ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಸಾಂಸ್ಕೃತಿಕ, ಕ್ರೀಡಾ, ಸಮಾಜಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಯಕತ್ವ ಗುಣ, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ, ಸಮಾಜಸೇವಕ ಸಾಗರಿಕ ಪಕ್ಷಿಕೆರೆ ಧನಂಜಯ ಪಿ.ಶೆಟ್ಟಿಗಾರ್ ಹೇಳಿದರು.
ನಾಲ್ಯಪದವು ಶಕ್ತಿನಗರ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಯೋಜಿಸಲಾದ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದರು.
ಚೇಳ್ಯಾರು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ಚಂದ್ರನಾಥ ಎಂ. ಮಾತನಾಡಿದರು. ಸಂಸ್ಥೆಗೆ ನೀಡಿದ ಅಮೂಲ್ಯ ಸೇವೆ ಪರಿಗಣಿಸಿ ಉದ್ಯಮಿ ಪ್ರಸಾದ್ ಟಿ.ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಪ್ರಾಂಶುಪಾಲ ಜಯಾನಂದ ಎನ್.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅಶೋಕ್ ನಾಯ್ಕ ಶುಭ ಹಾರೈಸಿದರು. ಹಿರಿಯ ಉಪನ್ಯಾಸಕಿ ಸರಳಾದೇವಿ ಪಿ. ಸ್ವಾಗತಿಸಿದರು. ಉಪನ್ಯಾಸಕಿ ರೂಪಾ ನಿರೂಪಿಸಿದರು. ಉಪನ್ಯಾಸಕಿ ವೀಣಾ ಶಾಲೆಟ್ ವಾಸ್ ವಂದಿಸಿದರು.