ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿ ಮುಂಭಾಗ ಎಸ್‌ಡಿಪಿಐನಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು. ಅನ್ವರ್ ಸಾದತ್ ಬಜತ್ತೂರು, ಅಶ್ರಫ್ ತಲಪಾಡಿ, ಅಕ್ಬರ್ ಬೆಳ್ತಂಗಡಿ, ರಶೀದ್ ಮೊದಲಾದವರು ಇದ್ದರು.  
ಉಡುಪಿ

ಸರ್ಕಾರ ಪಡಿತರದಲ್ಲಿ ಕುಚ್ಚಲುಅಕ್ಕಿ ವಿತರಿಸಲಿ

ಇಂದಿರಾ ಎನ್ ಕೆ
ಬೆಳ್ತಂಗಡಿ: ಕರಾವಳಿ ಭಾಗದ ಸಾವಿರಾರು ಕುಟುಂಬಗಳ ಆಹಾರ ಪದ್ಧತಿಯಲ್ಲಿ ಕುಚ್ಚಲು ಅಕ್ಕಿಗೆ ವಿಶೇಷ ಸ್ಥಾನವಿದೆ. ಸ್ಥಳೀಯರ ಆಹಾರ ಸಂಸ್ಕೃತಿ ಹಾಗೂ ಜೀವನಶೈಲಿಗೆ ಹೊಂದುವ ಆಹಾರ ಧಾನ್ಯ ಪಡಿತರ ವ್ಯವಸ್ಥೆಯ ಮೂಲಕ ಒದಗಿಸುವುದು ಸರ್ಕಾರದ ಜವಾಬ್ದಾರಿ. ಆದ್ದರಿಂದ ಕರಾವಳಿ ಭಾಗದ ಜನರ ಆಹಾರ ಹಕ್ಕಿಗೆ ಗೌರವ ನೀಡಿ, ಪಡಿತರದಲ್ಲಿ ಕುಚ್ಚಲು ಅಕ್ಕಿ ವಿತರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಹೇಳಿದರು.
ನಮ್ಮ ಆಹಾರ ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು ಎಂಬ ಘೋಷಣೆಯೊಂದಿಗೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದರು.
ಪ್ರತಿಭಟನೆಯ ಅಂಗವಾಗಿ ನ್ಯಾಯಬೆಲೆ ಅಂಗಡಿಗೆ ಆಗಮಿಸಿದ ಸಾರ್ವಜನಿಕರಿಗೆ ಸಾಂಕೇತಿಕವಾಗಿ ಕುಚ್ಚಲು ಅಕ್ಕಿ ವಿತರಿಸಲಾಯಿತು.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ರಶೀದ್, ಲಾಯಿಲ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷ ರಿಯಾಜ್, ಕಾರ್ಯದರ್ಶಿ ಬಶೀರ್, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.