ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು.
ಕುಂದಾಪುರ: ಮಾಧ್ಯಮಗಳು ಜನಪರ ಧ್ವನಿಯಾಗಬೇಕು. ಮಾಧ್ಯಮಗಳು ನ್ಯಾಯಾಂಗ, ಕಾಯಾರ್ಂಗ ಮತ್ತು ಶಾಸಕಾಂಗಗಳ ಮೇಲೆ ನಿಗಾ ಇಡಬೇಕು. ಪತ್ರಕರ್ತರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯ ನಿಭಾಯಿಸಬೇಕು. ಅಲ್ಲದೆ ಜನರು ಮತ್ತು ಸರ್ಕಾರದ ನಡುವೆ ಸಂಪರ್ಕ ಶಕ್ತಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ವಾಧ್ಯಮಗಳಿಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಹೇಳಿದರು.
ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಪತ್ರಿಕೋದ್ಯಮ ವಿಭಾಗ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಶನಿವಾರ ನಡೆದ ‘ರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ಯು.ಎಸ್.ಶೆಣೈ, ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಯೋಜಕ ಪ್ರೊ.ಸತ್ಯನಾರಾಯಣ ಮತ್ತು ಪತ್ರಕರ್ತ ಜಾನ್ ಡಿಸೋಜ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶ್ರಾವ್ಯಾ ಮತ್ತು ಧೃತಿ ಗೌಡ ಅನಿಸಿಕೆ ವ್ಯಕ್ತಪಡಿಸಿದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಸುಮಲತಾ ಸುರೇಶ್ ನಿರೂಪಿಸಿದರು. ವಿದ್ಯಾರ್ಥಿನಿ ಕೀರ್ತಿ ಸತೀಶ್ ಪಟಗಾರ ಸ್ವಾಗತಿಸಿದರು. ಸೃಜನ್ ಪೂಜಾರಿ ವಂದಿಸಿದರು.