ಬೈಂದೂರು ತಾಲೂಕು ಕಚೇರಿಯಲ್ಲಿ ರಾಜ್ಯ ಸರ್ಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿದರು. ಪ್ರಮುಖರಾದ ಮೋಹನ್ ಪೂಜಾರಿ, ರವಿರಾಜ್ ದೀಕ್ಷಿತ್, ಎಚ್.ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು. 
ಉಡುಪಿ

ಕಾಟಾಚಾರದ ಜನಸ್ಪಂದನೆಯಾಗದಿರಲಿ ಆಂದೋಲನ

ಬೈಂದೂರು: ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಜನಸ್ಪಂದನ ಕಾರ್ಯಕ್ರಮ ಕೈಗೊಂಡಿದ್ದರೂ ಜನಸ್ಪಂದನ ಸಭೆಗಳಲ್ಲಿ ಇತ್ಯರ್ಥವಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ಇಲ್ಲ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅಸಮಾಧಾನ ವ್ಯಕ್ತಪಡಿಸಿದರು.
ಬೈಂದೂರು ತಾಲೂಕು ಕಚೇರಿಯಲ್ಲಿ ರಾಜ್ಯ ಸರ್ಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಸಭೆಯಲ್ಲೂ ಹಾಜರಾಗಲು ನೋಟಿಸ್ ಕಳುಹಿಸಿರುವ ಹೆಚ್ಚಿನ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಪ್ರಜಾಸೇವೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಪ್ರಜಾಸೇವೆ ಆಂದೋಲನ ಮತ್ತೊಂದು ಕಾಟಾಚಾರದ ಜನಸ್ಪಂದನೆ ಕಾರ್ಯಕ್ರಮವಾಗದೆ ಕ್ಷೇತ್ರದ ಜನಸಾಮಾನ್ಯರ ಬೇಡಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಎಲ್ಲ ಇಲಾಖೆಗಳು ತಮ್ಮ ಹೊಣೆಯರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಬೈಂದೂರು ತಹಸೀಲ್ದಾರ್ ರವಿರಾಜ್ ದೀಕ್ಷಿತ್, ಎಚ್.ರಾಮಚಂದ್ರಪ್ಪ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.