ಕುತ್ಲೂರು ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್, ಶ್ರೀನಿವಾಸ್ ನಾಯಕ್ ಇಂದಾಜೆ, ಪುಷ್ಪರಾಜ್ ಬಿ.ಎನ್., ಕನಕವರ್ಮ ಜೈನ್ ಇತರರು ಇದ್ದರು.
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಶಾಲಾ ಮಕ್ಕಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಉದಾರಹಣೆಗಳಿವೆ. ಪರಿಸರ ಉಳಿಸಿ ಬೆಳೆಸುವಲ್ಲಿ ಸಂ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೂಡಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಹೇಳಿದರು.
ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಮೂಡಬಿದಿರೆ ಉಪ ವಿಭಾಗ ಹಾಗೂ ಕುತ್ಲೂರು ಶಾಲೆಯ ವನಸಿರಿ ಇಕೋ ಕ್ಲಬ್‌ನಿಂದ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.
ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಸರ್ಕಾರಿ ಶಾಲೆಗೆ ನೆರವು ನೀಡಿದ ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್ ಇದ್ದರು.
ಗಿಡನೆಟ್ಟು ಉತ್ತಮ ರೀತಿಯಲ್ಲಿ ಪೋಷಿಸುವ ಶಾಲಾ ವಿದ್ಯಾರ್ಥಿಗಳಿಗೆ ತಲಾ 200 ರೂ. ಬಹುವಾನ, ಅರಣ್ಯ ಇಲಾಖೆಯಿಂದ ಶಾಲಾ ಆವರಣದಲ್ಲಿ ಫ್ರೂಟ್ ಪಾರ್ಕ್ ನಿರ್ಮಾಣ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವೈಯುಕ್ತಿಕ ಕೊಡುಗೆಯಾಗಿ ನೀಡಲಾಗುವುದು.
— ಪಿ.ಶ್ರೀಧರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ