ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಕೋಟತಟ್ಟು ಪಡುಕರೆ ಕೇರ್ಜುಮನೆ ಚಂದ್ರ ಪೂಜಾರಿ ಅವರಿಗೆ ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕೋಟ: ರೈತ ಕಾಯಕ ಪ್ರಸ್ತುತ ಹಿರಿಯ ಜೀವಿಗಳಲ್ಲಿ ಕಾಣುತ್ತಿದ್ದೇವೆ ಆದರೆ ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಬೇಕು ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಹೇಳಿದರು.
ಮಂಗಳವಾರ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಕೋಟ ರೈತಧ್ವನಿ ಸಂಘ ಸಹಯೋಗದೊಂದಿಗೆ 50ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಕೆ. ಮಾತನಾಡಿದರು. ಇದೇ ವೇಳೆ ರೈತ ಪುರಸ್ಕಾರವನ್ನು ಕೋಟತಟ್ಟು ಪಡುಕರೆಯ ಕೇರ್ಜುಮನೆ ಚಂದ್ರ ಪೂಜಾರಿ ಅವರಿಗೆ ನೀಡಲಾಯಿತು.
ಪ್ಲಾಸ್ಟಿಕ್‌ಮುಕ್ತ ಜಾಗೃತಿಯ ಅನುಷ್ಠಾನಕ್ಕಾಗಿ ಬೆಂಗಳೂರಿನ ಕ್ಯಾಪ್ಸ್ ಫೌಂಡೇಶನ್ ಕೊಡಮಾಡಿದ ಬಟ್ಟೆ ಚೀಲಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ, ವಡ್ಡರ್ಸೆ ಗ್ರಾಪಂ ಸದಸ್ಯ ಕೋಟಿ ಪೂಜಾರಿ, ಶ್ರೀನಿಧಿ ಫ್ರೆಂಡ್ಸ್ ಅಧ್ಯಕ್ಷ ಚಂದ್ರ ಪುತ್ರನ್, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಪಂಚವರ್ಣ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಉಪಸ್ಥಿತರಿದ್ದರು.
ಪಂಚವರ್ಣ ಯುವಕ ಮಂಡಲದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಸದಸ್ಯೆ ಗೀತಾ ಶಿವರಾಂ ಸನ್ಮಾನಪತ್ರ ವಾಚಿಸಿದರು.ಮಹಿಳಾ ಮಂಡಲದ ಸಂಚಾಕಿ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯೆ ಶ್ಯಾಮಲಾ ಸಿ.ಪುತ್ರನ್ ವಂದಿಸಿದರು.