ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಾಹಿತಿ ಕಾರ್ಯಾಗಾರವನ್ನು ನೋಮಿಸ್ ಕುರಿಯಕೋಸ್ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಮಹೇಶ್ ಕೆ.ಸವಣೂರು ಮೊದಲಾದವರಿದ್ದರು. 
ಉಡುಪಿ

ವ್ಯಸನಮುಕ್ತರಾದರೆ ಉತ್ತಮ ಜೀವನ

ನೆಲ್ಯಾಡಿ: ವಿದ್ಯಾರ್ಥಿ ಜೀವನದಲ್ಲಿ ಮಾದಕ ವ್ಯಸನ ಮತ್ತು ತಂಬಾಕುಗಳಿಗೆ ಬಲಿಯಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮೌಲ್ಯಯುತ ಬದುಕನ್ನು ನಡೆಸಲು ಸಾಧ್ಯವಿದೆ ಎಂದು ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ನೋಮಿಸ್ ಕುರಿಯಕೋಸ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಸಹಕಾರದೊಂದಿಗೆ ಸಂಸ್ಥೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ ಅಧ್ಯಕ್ಷ ೆವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಪ್ರೌಢಶಾಲೆ ಶಿಕ್ಷಕ ಕಿಶಾನ್ ಬಿ.ವಿ. ಮಾತನಾಡಿದರು.
ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಲಿಯಸ್ ಎಂ.ಕೆ., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಸದಸ್ಯ ವರ್ಗಿಸ್, ತುಕಾರಾಮ ರೈ ಹೊಸಮನೆ ಉಪಸ್ಥಿತರಿದ್ದರು. ಹೇಮಾವತಿ, ಸುಮನಾ ಸಹಕರಿಸಿದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕ ವಿಶ್ವನಾಥ ಶೆಟ್ಟಿ ವಂದಿಸಿದರು. ನೆಲ್ಯಾಡಿ ವಲಯ ಮೇಲ್ವಿಚಾರಕಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.