ಶಾಸಕ ಯಶ್ಪಾಲ್ ಸುವರ್ಣ ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಲ್. ಕೆ. ಜಿ. ತರಗತಿ ಉದ್ಘಾಟಿಸಿದರು.
ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಎಲ್. ಕೆ. ಜಿ. ತರಗತಿಯನ್ನು ಆರಂಭಿಸಲಾಗಿದ್ದು, ಈ ಮೂಲಕ ಖಾಸಗಿ ಶಾಲೆಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್. ಕೆ. ಜಿ. ತರಗತಿ ಉದ್ಘಾಟಿಸಿ ಮಾತನಾಡಿದರು.
ಹಳೆ ವಿದ್ಯಾರ್ಥಿ ಹಾಗೂ ಕೆನರಾ ಬ್ಯಾಂಕ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಐ.ಪಾಂಡುರಂಗ ಮಿತ್ತಂತಾಯ ಶಿಫಾರಸಿನ ಮೂಲಕ ಕೆನರಾ ಬ್ಯಾಂಕ್ ಸಿ. ಎಸ್. ಆರ್. ಅನುದಾನದಲ್ಲಿ ಮಂಜೂರಾದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು. ಕೆನರಾ ಬ್ಯಾಂಕ್ ವೃತ್ತ ಕಚೇರಿ ಪ್ರಧಾನ ವ್ಯವಸ್ಥಾಪಕ ಎಚ್. ಕೆ. ಗಂಗಾಧರ್, ಕೆನರಾ ಬ್ಯಾಂಕಿನ ಡಿಜಿಎಂ ಮಹಾಮಾಯ ಪ್ರಸಾದ್ ರಾಯ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ವಿರೂಪಾಕ್ಷ ( ಪ್ರಾಥಮಿಕ), ರಮೇಶ್ ಹೆಗ್ಡೆ (ಪ್ರೌಢಶಾಲೆ), ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಶೇಟ್, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ, ಪ್ರೌಢ ಶಾಲೆ ಮುಖ್ಯಶಿಕ್ಷಕಿ ಕುಸುಮಾ ಉಪಸ್ಥಿತರಿದ್ದರು.