ಲಾರಿ ಪಲ್ಟಿಯಾಗಿ ಕಲ್ಲಂಗಡಿ ಹಣ್ಣು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಯಿತು. 
ಉಡುಪಿ

ಕಾರು, ಸ್ಕೂಟರ್‌ಗೆ ಗುದ್ದಿ ಲಾರಿ ಪಲ್ಟಿ

ಕಾರ್ಕಳ: ಕಲ್ಲಂಗಡಿ ತರುತ್ತಿದ್ದ ಲಾರಿಯೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರು ಹಾಗೂ ಸ್ಕೂಟರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಿಟ್ಟೆ ಗ್ರಾಮದ ಪರಪಾಡಿ ಎಂಬಲ್ಲಿ ಬುಧವಾರ ನಡೆದಿದೆ.
ಮೈಸೂರಿನಿಂದ ಉಡುಪಿಗೆ ಕಲ್ಲಂಗಡಿ ಸಾಗಿಸುತ್ತಿದ್ದ ಲಾರಿ ನಿಟ್ಟೆ ಪರಪಾಡಿ ಶಾಲಾ ಬಳಿಯಲ್ಲಿ ಎದುರಿನಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್‌ಟೇಕ್ ಮಾಡಲು ಹೋಗಿ ಕಾರು ಹಾಗೂ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಕೂಟರ್ ಸವಾರಿಗೆ ಸಣ್ಣಪುಟ್ಟ ಗಾಯವಾಗಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಗುಚಿ ಬಿದ್ದ ಪರಿಣಾಮ ಲಾರಿಯಲ್ಲಿದ್ದ ಕಲ್ಲಂಗಡಿಯೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದು ಅಪಾರ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.