ಉಡುಪಿ

ಅನಾರೋಗ್ಯದಿಂದ ಬಳಲುತ್ತಿದ್ದಾತ ಆತ್ಮಹತ್ಯೆ

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪಡುಬಿದ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಪಡುಬಿದ್ರಿ ಪಡುಹಿತ್ಲು ಹೊಗೆಗುಡ್ಡೆಯ ಮುರಳೀಧರ ಸಾಲ್ಯಾನ್(42) ಮನೆಯಲ್ಲಿ ಬುಧವಾರ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

2 ವರ್ಷಗಳಿಂದ, ಬೆನ್ನುಹುರಿ ನೋವು ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಇತ್ತೀಚಿಗೆ ಒಂದು ತಿಂಗಳ ಹಿಂದೆ ಅರ್ನಿಯಾ ಕಾಯಿಲೆಯ ಬಗ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಸಹೋದರ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.