ಕೃಷ್ಣಪ್ಪ ಕುಲಾಲ್ 
ಉಡುಪಿ

ಸೊಪ್ಪು ಕೊಯ್ಯುತ್ತಿದ್ದವರು ವಿದ್ಯುತ್ ಸ್ಪರ್ಶಿಸಿ ಸಾವು

ಬಂಟ್ವಾಳ: ಗುಡ್ಡದಲ್ಲಿ ಸೊಪ್ಪು ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೊಡಂಕಾಪು ಬಳಿಯ ರಾಜೀವ ಪಲಿಕೆ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತರನ್ನು ಕೃಷ್ಣಪ್ಪ ಕುಲಾಲ್(82) ಎಂದು ಗುರುತಿಸಲಾಗಿದೆ. ಅವರು ಮನೆಯ ಸಮೀಪದ ಗುಡ್ಡದಲ್ಲಿ ಸೊಪ್ಪು ಕೊಯ್ಯುತ್ತಿದ್ದರು. ಇದೇ ಭಾಗದಲ್ಲಿ ಶಂಭೂರು ಎ.ಎಂ.ಆರ್. ಸ್ಥಾವರದಿಂದ ವಿದ್ಯುತ್ ಪೂರೈಕೆಯಾಗುವ 110 ಕೆ.ವಿ. ಹೈಟೆನ್ಶನ್ ವಿದ್ಯುತ್ ಮಾರ್ಗವಿದ್ದು ಈ ಲೈನ್‌ನ ಕೆಳಭಾಗದಲ್ಲಿ ಸೊಪ್ಪು ಕೊಯ್ಯುವಾಗ ವಿದ್ಯುತ್ ಸ್ಪರ್ಶಗೊಂಡು ತೀವ್ರ ಆಘಾತಕ್ಕೊಳಗಾಗಿದ್ದರು.
ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.