ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕೋತ್ಸವದಲ್ಲಿ ಸಾಧಕರನ್ನು ಗೌರವಿಸಲಾಯಿತು. ಪ್ರೊ.ಡಾ.ಅರ್ಪಣ್ ಎ.ಭಟ್, ಡಿ.ಹರ್ಷೇಂದ್ರ ಕುಮಾರ್, ಡಾ.ಎಸ್.ಸತೀಶ್ಚಂದ್ರ, ಡಾ.ಶಿವಪ್ರಸಾದ ಶೆಟ್ಟಿ ಮೊದಲಾದವರಿದ್ದರು. 
ಉಡುಪಿ

ವೈದ್ಯಕೀಯ ಕ್ಷೇತ್ರ ನಿರ್ವಹಣೆಗೆ ಹೆಚ್ಚಿನ ಮಹತ್ವ

ಉಜಿರೆ: ನಮ್ಮ ಬದುಕಿನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ ನಿರ್ವಹಣೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆ ಇದೆ. ಪ್ರಾಚೀನ ಕಾಲದಲ್ಲಿ ಜನರು ತಮ್ಮದೇ ಆದ ತತ್ವ-ಸಿದ್ಧಾಂತಗಳು, ಧಾರ್ಮಿಕ ನಂಬಿಕೆ, ಆಧ್ಯಾತ್ಮಿಕ ಚಿಂತನ-ಮಂಥನದೊಂದಿಗೆ, ಸತ್ಯ, ಧರ್ಮ, ನ್ಯಾಯ-ನೀತಿಯ ಮಾರ್ಗದಲ್ಲಿ ನಡೆದು ನೆಮ್ಮದಿಯ ಜೀವನ ನಡೆಸುತ್ತಿದ್ದರು. ಧರ್ಮ ಮತ್ತು ಅಧ್ಯಾತ್ಮ ಭಾರತೀಯರ ಆತ್ಮದಷ್ಟೇ ಮುಖ್ಯವಾಗಿದೆ ಎಂದು ಜಾಮ್ನಗರ್‌ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಅರ್ಪಣ್ ಎ.ಭಟ್ ಹೇಳಿದರು.
ಬುಧವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿ ಚಿಕಿತ್ಸಾ ಪದ್ಧತಿ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಲು ಸಂಶೋಧನಾ ಕಾರ್ಯ ನಡೆಸಬೇಕು ಎಂದು ಸಲಹೆ ನೀಡಿದರು.
ಡಾ.ರಿಶಿಕಾ ರೈ ವರದಿ ಪ್ರಸ್ತುತಪಡಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಡಾ.ಶಿವಪ್ರಸಾದ ಶೆಟ್ಟಿ, ಡಾ.ಗೀತಾ ಬಿ.ಶೆಟ್ಟಿ ಉಪಸ್ಥಿತರಿದ್ದರು.
ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಡಾ.ಸುಜಾತಾ ವಂದಿಸಿದರು. ಡಾ.ರಿಶಿಕಾ ರೈ, ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರತಿಭಾವಂತ ಸಾಧಕರನ್ನು ಗೌರವಿಸಲಾಯಿತು.