* ವಿವಿಧ ತಳಿಗಳ ಪ್ರದರ್ಶನ, ಮಾರಾಟ
* ಸಂಸದ ಕೋಟ ಪೂಜಾರಿ ಉದ್ಘಾಟನೆ
ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ (ರಿ.) ರಾಮನಗರ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಮೇ 14ರಿಂದ ಮೇ 17ರ ವರೆಗೆ 'ಮಾವು ಮೇಳ-2026' ಆಯೋಜಿಸಲಾಗಿದೆ. ಮೇ 14ರಂದು ಬೆಳಗ್ಗೆ 11 ಗಂಟೆಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ತೋಟಗಾರಿಕಾ ಇಲಾಖೆಯ ನಿರ್ದೇಶಕ ಇಬ್ರಾಹಿಂ ಮೈಗೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ತೋಟಗಾರಿಕಾ ಇಲಾಖೆಯ ಅಪರ ನಿರ್ದೇಶಕಿ (ತಾಳೆ ಬೆಳೆ) ಡಾ. ಎಸ್. ನಂದಾ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕೊಡ್ಗಿ, ಉಡುಪಿ ಜಿಲ್ಲಾ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
ಉಡುಪಿಯ ದೊಡ್ಡಣಗುಡ್ಡೆಯಲ್ಲಿ ಆಯೋಜಿಸಿರುವ ವಿಶೇಷ ಮಾವು ಮೇಳದಲ್ಲಿ ವಿವಿಧ ತಳಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಜಿಲ್ಲೆಯ ರೈತರು, ತೋಟಗಾರರು, ಸಾರ್ವಜನಿಕರು ಹಾಗೂ ಮಾವು ಪ್ರಿಯರು ಸದುಪಯೋಗ ಮಾಡಿಕೊಳ್ಳಬೇಕು.
— ಕೋಟ ಶ್ರೀನಿವಾಸ ಪೂಜಾರಿ. ಉಡುಪಿ ಸಂಸದ.