ಮೂಡುಬಿದಿರೆಯಲ್ಲಿ ಹಲಸು-ಮಾವು, ಸ್ವದೇಶಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಾ.ಎಂ.ಮೋಹನ್ ಆಳ್ವ ಉದ್ಘಾಟಿಸಿದರು. ಪ್ರಮುಖರಾದ ಅಭಯಚಂದ್ರ ಜೈನ್, ರಶ್ಮಿತಾ ಜೈನ್, ಇಂದು ಎಂ. ಮತ್ತಿತರರಿದ್ದರು.
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಗ್ರಾಮೀಣ ಭಾಗದ ರೈತರು, ಗೃಹ ಕೈಗಾರಿಕೆ ನಡೆಸುವವರು, ಸ್ವದೇಶಿ ಉತ್ಪನ್ನ ತಯಾರಕರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚಾಗಿ ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ದೀಪಂ ಇವೆಂಟ್ಸ್ ಆಶ್ರಯದಲ್ಲಿ ಹಲಸು-ಮಾವು, ಸ್ವದೇಶಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಸಮಾಜ ಮಂದಿರದ ಸ್ವರ್ಣ ಮಂದಿರದಲ್ಲಿ ಚಾಲನೆ ನೀಡಿ ಮಾತನಾಡಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ., ಉದ್ಯಮಿ ಶ್ರೀಪತಿ ಭಟ್, ಬಿಜೆಪಿ ಮುಖಂಡ ಸುದರ್ಶನ್ ಎಂ., ಬಂಟರ ಸಂಘ ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ, ಸಮಾಜ ಮಂದಿರ ಕಾರ್ಯದರ್ಶಿ ಸುರೇಶ್ ಪ್ರಭು ಉಪಸ್ಥಿತರಿದ್ದರು. ಅರ್ಚನಾ ವಿಜಯ್ ಶೆಟ್ಟಿ ಸ್ವಾಗತಿಸಿದರು. ಶ್ವೇತಾ ಎಸ್.ಜೈನ್ ನಿರೂಪಿಸಿದರು. ಸುಧಾ ವಂದಿಸಿದರು.
ಸ್ವದೇಶಿ ಉತ್ಪನ್ನಗಳ ಮೇಳ ನಮ್ಮ ಆಹಾರ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉತ್ತಮ ವೇದಿಕೆಯಾಗಿವೆ. ಯುವಜನತೆ ಜಂಕ್ ುಡ್‌ಗಳಿಂದ ದೂರವಿದ್ದು, ಪೌಷ್ಟಿಕಾಂಶಯುಕ್ತ ಸ್ವದೇಶಿ ಹಣ್ಣು-ಹಂಪಲು, ಆಹಾರ ಪದಾರ್ಥ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು.
— ರಶ್ಮಿತಾ ಜೈನ್ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ