ಅಂತಾರಾಷ್ಟ್ರೀಯ ಯೂತ್ ಗೇಮ್ಸ್‌ನಲ್ಲಿ ಪ್ರಥಮ ಸ್ಥಾನ ಪಡೆದ ಮಾರುತಿ.
ಬೆಳ್ತಂಗಡಿ: ಯೂತ್ ಗೇಮ್ಸ್ ಫೌಂಡೇಶನ್ ಇಂಡಿಯಾ ನೇಪಾಳದಲ್ಲಿ ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯಮಟ್ಟದ ಯೂತ್ ಗೇಮ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಎಸ್.ಡಿ.ಎಂ. ಕ್ರೀಡಾ ಸಂಘದ ವಿದ್ಯಾರ್ಥಿ ಮಾರುತಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಪ್ರಥಮ ವರ್ಷದ ಬಿ.ಎ. ವಿದ್ಯಾರ್ಥಿಯಾಗಿರುವ ಮಾರುತಿ ಇತ್ತೀಚೆಗೆ ಯೂತ್ ಗೇಮ್ಸ್ ಕೌನ್ಸಿಲ್ ಆಫ್ ಇಂಡಿಯಾ ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯಮಟ್ಟದ ಓಪನ್ ಯೂತ್ ಗೇಮ್ಸ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ.ಪೂಂಜ ತರಬೇತಿ ನೀಡಿದ್ದಾರೆ.
ವಿದ್ಯಾರ್ಥಿಯನ್ನು ಎಸ್.ಡಿ.ಎಂ. ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರನ್ ವರ್ಮ, ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ., ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸಂದೇಶ್ ಬಿ.ಪೂಂಜ, ಸುದೀನ್ ಪೂಜಾರಿ, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಸೇರಿದಂತೆ ಸಿಬ್ಬಂದಿ ಅಭಿನಂದಿಸಿದ್ದಾರೆ.