ಹನುಮಗಿರಿ ಕ್ಷೇತ್ರದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಶ್ರೀಕೃಷ್ಣ ಭಟ್ ಬಿಡುಗಡೆಗೊಳಿಸಿದರು. ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಸೀತಾರಾಮ ರೈ ಕೆದಂಬಾಡಿಗುತ್ತು, ಸಾಜ ರಾಧಾಕಷ್ಣ ಆಳ್ವ ಇತರರಿದ್ದರು. 
ಉಡುಪಿ

ಹನುಮಗಿರಿ ಬ್ರಹ್ಮಕಲಶ ಸಮಾಜದ ಉತ್ಸವವಾಗಲಿ

ಪುತ್ತೂರು ಗ್ರಾಮಾಂತರ: ಹನುಮಗಿರಿ ಕ್ಷೇತ್ರದ ಬ್ರಹ್ಮಕಲಶ ಸವಾಜದ ಉತ್ಸವವಾಗಬೇಕು. ಎಲ್ಲ ವರ್ಗದವರನ್ನು ಒಗ್ಗೂಡಿಸಿ ಅದ್ದೂರಿಯಾಗಿ ಬ್ರಹ್ಮಕಲಶ ನಡೆಸಲು ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ರಮ ಹಿಂದೂ ಸವಾಜದಲ್ಲಿ ವಿಶಿಷ್ಟವಾಗಿರಲಿದ್ದು, ಇಂತಹ ಪುಣ್ಯಕಾರ್ಯದಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಹನುಮಗಿರಿ ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಶ್ರೀಕೃಷ್ಣ ಭಟ್ ಮುಂಡ್ಯ ಕರೆ ನೀಡಿದರು.
ಹನುಮಗಿರಿ ಕ್ಷೇತ್ರದಲ್ಲಿ ಏ.9ರಿಂದ 12ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ ಚಪ್ಪರ ಮುಹೂರ್ತ, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಕ್ಷೇತ್ರದ ವೆಬ್‌ಸೈಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಜಯಂತ ನಡುಬೈಲು ಚಪ್ಪರಮುಹೂರ್ತ ನೆರವೇರಿಸಿದರು. ಪ್ರಗತಿಪರ ಕೃಷಿಕ ಸಂತೋಷ್ ರೈ ಇಳಂತಾಜೆ ಕ್ಷೇತ್ರದ ವೆಬ್‌ಸೈಟ್ ಅನಾವರಣ ಮಾಡಿದರು.
ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಸೀತಾರಾಮ ರೈ ಕೆದಂಬಾಡಿಗುತ್ತು, ಸಾಜ ರಾಧಾಕಷ್ಣ ಆಳ್ವ, ಬೂಡಿಯಾರ್ ರಾಧಾಕೃಷ್ಣ ರೈ, ಚನಿಲ ತಿಮ್ಮಪ್ಪ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಶಶಿಕುವಾರ್ ರೈ ಬಾಲ್ಯೊಟ್ಟು, ವಿದ್ಯಾ, ಗೌರಿ, ದಿನೇಶ್ ಮೆದು, ರವಿಕಿರಣ್ ಶೆಟ್ಟಿ ಬೆದ್ರಾಡಿ, ರಾಕೇಶ್ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ಆರ್.ಸಿ.ನಾರಾಯಣ ರೆಂಜ, ಸ್ವಾಗತ ಸಮಿತಿ ಉಪಾಧ್ಯಕ್ಷರಾದ ವಿದ್ಯಾಧರ ಜೈನ್, ಅಜಿತ್ ರೈ ಹೊಸಮನೆ ಮತ್ತಿತರರು ಇದ್ದರು.
ಕ್ಷೇತ್ರದ ಧರ್ಮದರ್ಶಿ ಶಿವರಾಮ ಪಿ. ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಹುಷ ಪಳನೀರು ವಂದಿಸಿದರು. ಶಿಕ್ಷಕ ದೇವಿಪ್ರಸಾದ ಶೆಟ್ಟಿ ಕುತ್ಯಾಳ ಕಾರ್ಯಕ್ರಮ ನಿರೂಪಿಸಿದರು.

ದೇವಾಲಯ ಎಂಬುದು ವಿಶೇಷ ಚೈತನ್ಯವಿರುವ ಕ್ಷೇತ್ರ. ಧಾರ್ಮಿಕ ಕಾರ್ಯಗಳು ನಡೆದಾಗ ಅದಕ್ಕೆ ಇನ್ನಷ್ಟು ಶಕ್ತಿ ಬರುತ್ತದೆ. ಕ್ಷೇತ್ರದ ಬ್ರಹ್ಮಕಲಶ ಕಾರ್ಯಕ್ರಮದ ಯಶಸ್ಸಿಗೆ ಸಮಿತಿ ರಚನೆಯಾಗಿ ಪೂರ್ವಸಿದ್ಧತೆ ವಾಡಿಕೊಳ್ಳಲಾಗಿದೆ. ಸಮಿತಿ ಅಧ್ಯಕ್ಷ ನಳಿನ್ ಕುವಾರ್ ಕಟೀಲ್ ವಾರ್ಗದರ್ಶನದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ.